Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ,ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ

---Advertisement---

ಸುದ್ದಿಒನ್,ಮೈಸೂರು,ಮೇ.14: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಶಾಲಾ ಸಮವಸ್ತ್ರ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2022ರ ಸಮವಸ್ತ್ರ ಆದೇಶವನ್ನು ಹಿಂಪಡೆದಿರುವ ಸರ್ಕಾರ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹೊಸ ಆದೇಶದಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿರುವುದು ಈಗ ರಾಜ್ಯಾದ್ಯಂತ ಚರ್ಚೆಗೆ ಹಾಗೂ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ತಮ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಕೆಲವು ಧಾರ್ಮಿಕ ವಸ್ತುಗಳನ್ನು ಧರಿಸಲು ಮುಕ್ತ ಅವಕಾಶ ನೀಡಲಾಗಿದೆ. ಇದರಲ್ಲಿ ಪ್ರಮುಖವಾಗಿ ಹಿಜಾಬ್, ಜನಿವಾರ, ಶಿವದಾರ / ಉಡದಾರ, ರುದ್ರಾಕ್ಷಿ ಹಾಗೂ ಪೇಟ ಅವಕಾಶ ನೀಡಲಾಗಿದೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. “ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಅವರವರ ಧರ್ಮಕ್ಕೆ ಸಂಬಂಧಿಸಿದ ಸಾಂಪ್ರದಾಯಿಕ ವಸ್ತುಗಳನ್ನು ಧರಿಸಲು ಅಭ್ಯಂತರವಿಲ್ಲ. ಆದರೆ, ಕೇಸರಿ ಶಾಲು ಧರಿಸಲು ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ಅವರು ಖಡಕ್ ಆಗಿ ತಿಳಿಸಿದ್ದಾರೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹೊಸ ರೂಪದ ಪೇಟಗಳಿಗೂ ಅನುಮತಿ ಇಲ್ಲ ಎಂದು ಅವರು ಹೇಳಿದ್ದಾರೆ.

Join WhatsApp

Join Now

Join Telegram

Join Now