ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಹಿಜಾಬ್ ವಿವಾದಕ್ಕೆ ತೆರೆ ಬಿದ್ದಿದೆ. ಇಂದು ಹೈಕೋರ್ಟ್ ತೀರ್ಪು ನೀಡಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಹಾಕೋದಕ್ಕೆ ಅವಕಾಶವಿಲ್ಲ ಎಂದು ತೀರ್ಪು ನೀಡಿದೆ.
ಕುಂದಾಪುರದ ಕಾಲೇಜೊಂದರಲ್ಲಿ ಶುರುವಾದ ಹಿಜಾಬ್ ವಿವಾದ ರಾಜ್ಯದೆಲ್ಲೆಡೆ ಹಬ್ಬಿತ್ತು. ಹಿಜಾಬ್ ಹಾಕಿ ಬಂದರೆ ನಾವೂ ಕೇಸರಿ ಶಾಲು ಹಾಕಿಕೊಂಡು ಬರ್ತೀವಿ ಅಂತ ವಿದ್ಯಾರ್ಥಿಗಳು ಶುರು ಮಾಡಿದ್ದರು. ಈ ವಿಚಾರ ಹೈಕೋರ್ಟ್ ನಲ್ಲಿ ದಾಖಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ.
ಈ ಸಂಬಂಧ ಹೈಕೋರ್ಟ್ ಉತ್ತರ ನೀಡಿದ್ದು, ಮುಸ್ಲಿಂ ಮಹಿಳೆಯರು ಹಿಬಾಜ್ ಧರಿಸುವುದು ಇಸ್ಲಾಮ್‌ನಲ್ಲಿ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಾಲೆಯಲ್ಲಿ ಸಮವಸ್ತ್ರ ಸೂಚಿಸಿರುವುದು ಒಂದು ಸಮಂಜಸವಾದ ನಿರ್ಬಂಧವಾಗಿದ್ದು, ವಿದ್ಯಾರ್ಥಿಗಳು ಅದನ್ನು ಆಕ್ಷೇಪಿಸುವಂತಿಲ್ಲ. ಆದೇಶ ಮಾಡಲು ಸರ್ಕಾರಕ್ಕೆ ಅಧಿಕಾರವಿದೆ ಎಂದಿದೆ.