ಬೆಂಗಳೂರು: ಹಿಜಾಬ್ ವಿವಾದ ಈಗ ಸಾಕಷ್ಟು ಸದ್ದು ಮಾಡುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ರಾಜ್ಯದಲ್ಲಿ ಹಲವು ಶಾಲೆಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ದೊಡ್ಡ ಮಟ್ಟದಲ್ಲೇ ಭುಗಿಲೆದ್ದಿದೆ. ಇದೀಗ ಇದರ ಪರಿಣಾಮ ರಾಜ್ಯದ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಕಾಲೇಜಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಕಾಲ ಶಾಲಾ ಕಾಲೇಜು ತೆರೆಯದಿರಲು ಸೂಚನೆ ನೀಡಲಾಗಿದೆ.