Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ : ಶಾಂತಿ-ಸುವ್ಯವಸ್ಥೆಗಾಗಿ ಪೊಲೀಸರಿಂದ ರೂಟ್ ಮಾರ್ಚ್

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ನಗರದಲ್ಲಿ ಅಕ್ಟೋಬರ್ 3ರಂದು ಶನಿವಾರ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಬೃಹತ್ ಶೋಭಯಾತ್ರೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು.

ನಗರದ ಮುರುಘರಾಜೇಂದ್ರ ಕ್ರೀಡಾಂಗಣದ ಮುಂಭಾಗದಿಂದ ಆರಂಭಗೊಂಡ ಪೊಲೀಸ್ ಪಡೆಗಳ ರೂಟ್ ಮಾರ್ಚ್, ನಗರದ ಬಿ.ಡಿ. ರಸ್ತೆ ಮೂಲಕ ಮದಕರಿ ನಾಯಕ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಗಾಂಧಿ ವೃತ್ತ ಹಾಗೂ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಮೂಲಕ ಚಂದ್ರವಳ್ಳಿವರೆಗೂ ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಲಾಯಿತು.

ಡಿಐಜಿ ಪರಶುರಾಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಾಥ್ ಎಂ ಜೋಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ರಂಜಿತ್ ಕುಮಾರ್ ಭಂಡಾರು ಸೇರಿದಂತೆ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಪಥ ಸಂಚಲನದಲ್ಲಿ ಡಿಎಆರ್, ಕೆಎಸ್‌ಆರ್‌ಪಿ ಹಾಗೂ ವಿವಿಧ ಪೊಲೀಸ್ ಪಡೆಗಳ ನಾಲ್ಕೂ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ರೂಟ್ ಮಾರ್ಚ್ ಆರಂಭಕ್ಕೂ ಮುನ್ನ ಮುರುಘಾ ರಾಜೇಂದ್ರ ಕ್ರೀಡಾಂಗಣದ ಮೈದಾನದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಂದೋಬಸ್ತ್ ಕುರಿತು ಬ್ರೀಪಿಂಗ್ ನೀಡಲಾಯಿತು.

ಶೋಭಯಾತ್ರೆ ವೇಳೆ ಕರ್ತವ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ಬಿಗಿ ಕಾವಲು ಕಾಯಬೇಕು, ಚೆಕ್‌ಪೋಸ್ಟ್‌‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಂಡು ಶಾಂತಿ ಕಾಪಾಡಲು ಸಹಕರಿಸಬೇಕು ಅಧಿಕಾರಿಗಳು ಮಾರ್ಗದರ್ಶನ ನೀಡಿದರು.

ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now