in

ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರೆವಣಿಗೆ: ರಸ್ತೆ  ಸಂಚಾರ ಮಾರ್ಗ ಬದಲಾವಣೆ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

suddione whatsapp group join

ಚಿತ್ರದುರ್ಗ, (ಸೆಪ್ಟೆಂಬರ್. 24) : ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ  ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಅಕ್ಟೋಬರ್ 2 ರಂದು ಇರುವುದರಿಂದ ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ನಗರದಲ್ಲಿ ಹಾದು ಹೋಗುವ ಮುಖ್ಯ ರಸ್ತೆಯಾದ ಬಿ.ಡಿ ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಹೋಗಲಿದ್ದು ವಿಸರ್ಜನಾ ಮೆರೆವಣಿಗೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು ಮೆರವಣಿಗೆ ಸಮಯದಲ್ಲಿ ಚಿತ್ರದುರ್ಗ ನಗರದಲ್ಲಿನ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು ನಗರದ ಮುಖ್ಯ ರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಸಂಚರಿಸಲು ಸಾದ್ಯವಾಗದ ಕಾರಣ ಆಕ್ಟೋಬರ್ 2 ರಂದು ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಸಂಚಾರ ಕ್ರಮಗೊಳಿಸುವ ದೃಷ್ಟಿಯಿಂದ ಚಿತ್ರದುರ್ಗ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಬದಲಿ ಮಾರ್ಗಗಳು: ಬೆಂಗಳೂರು ಮತ್ತು ಚಳ್ಳಕೆರೆ ಮಾರ್ಗವಾಗಿ ಬರುವ ವಾಹನಗಳು ಎನ್‍ಹೆಚ್-4 ಬೈಪಾಸ್ ರಸ್ತೆ ಮುಖಾಂತರ ಬಂದು ಮೆದೇಹಳ್ಳಿ ರಸ್ತೆ ಮತ್ತು ಎಪಿಎಂಸಿ ಮಾರುಕಟ್ಟೆ ಮುಖಾಂತರ ಬಸ್ ನಿಲ್ದಾಣಗಳಿಗೆ ಬಂದು ಪುನಃ ಅದೇ ಮಾರ್ಗದಲ್ಲಿ ಸಂಚರಿಸುವುದು.

ದಾವಣಗೆರೆ ಮಾರ್ಗದಿಂದ ಬರುವ ವಾಹನಗಳು ಜೆಎಂಐಟಿ ವೃತದ ಮುಖಾಂತರವಾಗಿ ಬಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಿಗೆ ಬಂದು ಪುನಃ ಅದೇ ಮಾರ್ಗದಲ್ಲಿ ಸಂಚಾರಿಸುವುದು. ಶಿವಮೊಗ್ಗ, ಹೊಳಲ್ಕೆರೆ, ಭೀಮಸಮುದ್ರದ ಮಾರ್ಗದಿಂದ ಬರುವ ವಾಹನಗಳು ಎನ್.ಹೆಚ್-13 ಬೈಪಾಸ್‍ನಲ್ಲಿ ಮುರುಘಾಮಠದವರೆಗೆ ಹೋಗಿ ನಂತರ ಎನ್.ಹೆಚ್-4 ಬೈಪಾಸ್ ರಸ್ತೆಯ ಮುಖಾಂತರ ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ನಿಲ್ದಾಣಕ್ಕೆ ಬಂದು ಪುನಃ ವಾಪಸ್ ಅದೇ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

789 ಕೊರೊನಾ ಸೋಂಕಿತರು..23 ಜನ ಸಾವು..!

ಕೋವಿಡ್ ಬಗ್ಗೆ ಉತ್ತರ ಕೇಳದೆ ಪಲಾಯನ ಮಾಡಿದ ಕಾಂಗ್ರೆಸ್: ಸಚಿವ ಡಾ.ಕೆ.ಸುಧಾಕರ್