ಸುದ್ದಿಒನ್, ಚಿತ್ರದುರ್ಗ, ಆ.24 : ಪ್ರತಿ ವರ್ಷದಂತೆ ಈ ಬಾರಿಯೂ ನಗರದಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದೆಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ನೂತನ ಅಧ್ಯಕ್ಷ ಜಿ.ಎಂ.ಸುರೇಶ್ ತಿಳಿಸಿದರು.
ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೆ. 3 ರಂದು ಧ್ವಜಪೂಜೆ, 18 ರಂದು ಗಣಪತಿ ಪ್ರತಿಷ್ಠಾಪನೆಯಾಗಲಿದ್ದು, ಅ.8 ರಂದು ಶೋಭಾಯಾತ್ರೆ ನಂತರ ವಿಸರ್ಜನೆಯಾಗುತ್ತದೆ.
ಸಣ್ಣ ಉಪ ಸಮಿತಿಗಳನ್ನು ರಚಿಸಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಪ್ರಭಂಜನ್ ಮಾತನಾಡಿ ಸಾವರ್ಕರ್ ಹಾಗೂ ಅಶೋಕ್ ಸಿಂಘಾಲ್ ಮಂಟಪದ ಜ.ರಾ.ರಾಮಮೂರ್ತಿ ವೇದಿಕೆಯಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಯಾಗಲಿದೆ. ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದು, 35 ರಿಂದ 40 ಮಂದಿ ಪದಾಧಿಕಾರಿಗಳಿರುತ್ತಾರೆ.
ಹಳಬರ ಜೊತೆ ಹೊಸಬರು ಸೇರಿ ಈ ಬಾರಿ ಶೋಭಾಯಮಾನವಾಗಿ ಶೋಭಾಯಾತ್ರೆಯನ್ನು ನೆರವೇರಿಸಲಾಗುವುದು. ವಿಶೇಷ ಕಲಾ ತಂಡಗಳು ಭಾಗವಹಿಸಲಿವೆ ಎಂದರು.
ರುದ್ರೇಶ್, ಶರಣ್, ಸಂದೀಪ್, ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















