ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

2 Min Read

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ ನೀಡಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆಗೆ ಜಿಲ್ಲೆ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ. ಶಾಂತಿ ಹಾಗೂ ಸುವ್ಯವಸ್ಥೆಯಿಂದ ಮೆರವಣಗೆÂ ನಡೆಯಲು ಅನುವಾಗುವಂತೆ ಪೊಲೀಸ್ ಇಲಾಖೆಯಿಂದ ಈಗಾಗಲೇ ಸೂಕ್ತ ಬಂದೋಬಸ್ತ್ಗೆ ಕ್ರಮ ಕೈಗೊಳ್ಳಲಾಗಿದೆ. ಸಂಘಟಕರು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮೆರವಣಿಗೆಯನ್ನು ಪ್ರಾರಂಭಿಸಿ ರಾತ್ರಿ 9 ಗಂಟೆಯ ಒಳಗೆ ಮೆರವಣಿಗೆ ಮುಕ್ತಾಯಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ನಗರದ ಬಿ.ಡಿ ರಸ್ತೆ ಹಾಗೂ ಹೊಳಲ್ಕೆರೆ ರಸ್ತೆಯಲ್ಲಿ ಸುಗಮವಾಗಿ ಮೆರವಣಿಗೆ ಹಾದು ಹೋಗುವಂತೆ ನಗರಸಭೆಯಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಪೊಲೀಸರು ವೀಕ್ಷಣೆಗೆ ಅನುಕೂಲವಾಗುವಂತೆ ವಾಚ್‌ಟವರ್ ನಿರ್ಮಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ರಸ್ತೆಯಲ್ಲಿ ತಗ್ಗು ಗುಂಡಿಗಳು ಇದ್ದರೇ, ತಕ್ಷಣವೇ ಮುಚ್ಚುವ ಕೆಲಸ ಮಾಡಬೇಕು. ಮೆರವಣಿಗೆ ಸಾಗುವ ರಸ್ತೆ ಹಾಗೂ ಅಸು ಪಾಸಿನ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಸಾರ್ವಜನಿಕರು ಹತ್ತಿ ನಿಲ್ಲದಂತೆ ನಿರ್ಬಂಧ ವಿಧಿಸಬೇಕು. ಮೆರವಣಿಗೆ ವೇಳೆ ಹಠಾತ್ ಅನಾರೋಗ್ಯಕ್ಕೆ ತುತ್ತಾದವರನ್ನು ಆರೈಕೆ ಮಾಡಲು ಮೆರವಣಿಗೆ ಸಾಗುವ ಹಾದಿಯಲ್ಲಿ ಸೇಫ್ ಹೌಸ್‌ಗಳನ್ನು ಗುರುತಿಸಬೇಕು. ಆರೋಗ್ಯ ಇಲಾಖೆಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ವೊಂದನನ್ನು ಮೀಸಲಿರಿಸಿ, ಅಗತ್ಯ ವೈದ್ಯರನ್ನು ನೇಮಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ 4 ಆಂಬ್ಯುಲೆನ್ಸ್ಗಳನ್ನು ನಿಯೋಜಿಸಬೇಕು. ಬೆಸ್ಕಾಂ ಅಧಿಕಾರಿಗಳು ಮೆರವಣಿಗೆ ವೇಳೆ ವಿದ್ಯುತ್ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ವಿದ್ಯುತ್ ತಂತಿಗಳನ್ನು ಎತ್ತರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಅಬಕಾರಿ ಉಪನಿರೀಕ್ಷಕ ಮಾದೇಶ್, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿಯ ಬದ್ರನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಪದಾಧಿಕಾರಿಗಳು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *