Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಲಕ್ಷಾಂತರ ಜನರು ಭಾಗಿಯಾಗುವ ನಿರೀಕ್ಷೆ :  ಎಸ್.ಆರ್.ಪ್ರಭಂಜನ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.07  : ವಿಶ್ವಹಿಂದೂ ಪರಿಷತ್ ಬಜರಂಗದಳದ ವತಿಯಿಂದ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಐತಿಹಾಸಿಕ ಚಿತ್ರದುರ್ಗವನ್ನು ಕೇಸರಿಕರಣಗೊಳಿಸಲಾಗಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಎಸ್.ಆರ್.ಪ್ರಭಂಜನ್ ತಿಳಿಸಿದರು.

ಹಿಂದೂ ಮಹಾಗಣಪತಿ ಪೆಂಡಾಲ್‍ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರದ ಶೋಭಾಯಾತ್ರೆಗೆ ಸಿದ್ದತೆಗಳನ್ನು ಕೈಗೊಂಡಿದ್ದು, ಲಕ್ಷಾಂತರ ಜನ ಭಾಗಿಯಾಗುವ ನಿರೀಕ್ಷೆಯಿದೆ. ಬೆಳಿಗ್ಗೆ 10 ಗಂಟೆಗೆ ಮಹಾರಾಷ್ಟ್ರ ಕೊಲ್ಲಾಪುರದ ಕನ್ನೇರಿಮಠ್ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಮೆರವಣಿಗೆ ಉದ್ಘಾಟಿಸಲಿದ್ದು, ಹನ್ನೆರಡಕ್ಕೂ ಹೆಚ್ಚು ಸ್ವಾಮೀಜಿಗಳು ಶೋಭಾಯಾತ್ರೆ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.

ವಿಶೇಷ ಕಲಾ ತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕಷ್ಟು ಕಾರ್ಯಕರ್ತರು, ಜನಸಾಮಾನ್ಯರು ಕೆಲಸ ಮಾಡಿದ್ದಾರೆ. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು ಅಲ್ಲಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದರು.

ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್ ಮಾತನಾಡಿ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗದಲ್ಲಿ ಅಲಂಕಾರ ಮಾಡಿರುವುದನ್ನು ನೋಡಿ ಗ್ರಾಮೀಣ ಪ್ರದೇಶಗಳಿಂದ ತಂಡೋಪ ತಂಡವಾಗಿ ಜನ ಆಗಮಿಸಿ ಹಿಂದೂ ಮಹಾಗಣಪತಿಯ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಹೆಚ್ಚಿನ ಜನ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಅಲಂಕಾರ ಆಕರ್ಷಣೀಯವಾಗಿರುವುದರಿಂದ ಸಾಗರೋಪಾದಿಯಲ್ಲಿ ಜನ ಬರುತ್ತಾರೆ. ಹದಿನೇಳು ವರ್ಷಗಳಿಂದ ಹಿಂದೂ ಮಹಾಗಣಪತಿಗೆ ಬರದವರು ಈ ಸಾರಿ ಬಂದಿದ್ದಾರೆ. ವರ್ಷ ವರ್ಷಕ್ಕೂ ಹಿಂದೂ ಮಹಾಗಣಪತಿ ಒಂದು ಶಕ್ತಿಯಾಗಿ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ ಮುಖಂಡ ಟಿ.ಬದ್ರಿನಾಥ್, ಷಡಾಕ್ಷರಪ್ಪ, ಸಂದೀಪ್, ಪಿ.ರುದ್ರೇಶ್, ರಂಗಸ್ವಾಮಿ, ಕಿರಣ್‍ಕುಮಾರ್ ಪತ್ರಿಕಾಗೋಷ್ಠಿಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!