Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ : ನಗರದಲ್ಲಿ ಮಾರ್ಗ ಬದಲಾವಣೆ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆಯ ಮಾಹಿತಿ ಇಲ್ಲಿದೆ…

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.08 :  ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಇಂದು ನಡೆಯಲಿದ್ದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ  12 ಗಂಟೆಯವರೆಗೆ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಮಾರ್ಗ ಬದಲಾವಣೆ ವಿವರ :
ಚಳ್ಳಕೆರೆ ಮಾರ್ಗವಾಗಿ ಬರುವ ವಾಹನಗಳು ಎನ್.ಹೆಚ್-04
ಬೈಪಾಸ್ ಮುಖಾಂತರ ಎ.ಪಿ.ಎಂ.ಸಿ ಮಾರ್ಕೆಟ್ ಮತ್ತು ಜೆ.ಎಂ.ಐ.ಟಿ ವೃತ್ತದ ಮುಖಾಂತರ ಚಿತ್ರದುರ್ಗ ನಗರದೊಳಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪುನಃ ಅದೇ
ಮಾರ್ಗದಲ್ಲಿ ವಾಪಸ್ ಹೋಗುವುದು.

ಶಿವಮೊಗ್ಗ ಮತ್ತು ದಾವಣಗೆರೆ ಕಡೆಯಿಂದ ಬರುವ
ವಾಹನಗಳು ಮತ್ತು ಬಸ್ಸುಗಳು ಜೆ.ಎಂ.ಐ.ಟಿ ಮುಖಾಂತರ ಚಿತ್ರದುರ್ಗ ನಗರದೊಳಗೆ ಪ್ರವೇಶ ಮಾಡಿ
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದವರೆಗೆ ಬಂದು ಅದೇ ಮಾರ್ಗವಾಗಿ ವಾಪಾಸ್ ಹೋಗುವುದು.

ಯಾವುದೇ ಕಡೆಯಿಂದ ಬರುವ ಖಾಸಗಿ ಬಸ್ಸುಗಳು ಮೆದೆಹಳ್ಳಿ ರಸ್ತೆ ಮುಖಾಂತರ ಖಾಸಗಿ ಬಸ್
ನಿಲ್ದಾಣಕ್ಕೆ ಬಂದು ಪುನಃ ಅದೇ ಮಾರ್ಗವಾಗಿ ವಾಪಸ್ ಹೋಗುವುದು.

ಮೆರವಣಿಗೆ ಬರುವಂತಹ ಯಾವುದೇ ವಾಹನಗಳಿಗೆ ನಗರದ ಒಳಗಡೆ ಚಳ್ಳಕೆರೆ ಗೇಟ್‍ನಿಂದ ಹೊಳಲ್ಕೆರೆ ರಸ್ತೆ ಕಣಿವೆ ಕ್ರಾಸ್‍ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿದೆ‌‌ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಯಾವುದೇ ವಾಹನಗಳ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ.

ಕೆಳಕಂಡಂತೆ ನಗರದ 04 ಕಡೆಗಳಲ್ಲಿಯೂ ಸಂಚಾರಿ ನಿಯಂತ್ರಣ ಸಿಬ್ಬಂದಿಯಿಂದ ವಾಹನಗಳಿಗೆ
ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

1)  ಶಿವಮೊಗ್ಗ ಮತ್ತು ಹೊಳಲ್ಕೆರೆಯಿಂದ ಬರುವ ವಾಹನಗಳಿಗೆ ಚಂದ್ರವಳ್ಳಿ ಮತ್ತು ಎಸ್.ಜೆ.ಎಂ
ಕಾಲೇಜ್ ಮುಂಭಾಗದ ಮೈದಾನ ಮತ್ತು ಧವಳಗಿರಿ ಬಡಾವಣೆಯ ಡಬಲ್ ರೋಡ್‍ನಲ್ಲಿ
ವಾಹನಗಳ ನಿಲುಗಡೆ ವ್ಯವಸ್ಥೆ ಮಾಡಿರುತ್ತದೆ.

2) ದಾವಣಗೆರೆ ಕಡೆಯಿಂದ ಬರುವ ವಾಹನಗಳಿಗೆ ಎ.ಪಿ.ಎಂ.ಸಿ. ಯಾರ್ಡ್‍ನಲ್ಲಿ ವ್ಯವಸ್ಥೆ ಮಾಡಿರುತ್ತಾರೆ.

3) ಎನ್.ಹೆಚ್-13 ರಸ್ತೆಯಿಂದ ಬರುವ ವಾಹನಗಳಿಗೆ ಪೊಲೀಸ್ ಸಮುದಾಯ ಭವನದ ಮುಂದಿನ
ಮೈದಾನದಲ್ಲಿ ನಿಲುಗಡೆ ವ್ಯವಸ್ಥೆ ಮಾಡಿರುತ್ತದೆ.

4) ಚಳ್ಳಕೆರೆ ಮತ್ತು ಹಿರಿಯೂರು ಕಡೆಯಿಂದ ಬರುವ ವಾಹನಗಳಿಗೆ ಶ್ರೀರಾಮ ಕಲ್ಯಾಣ ಮಂಟಪದ
ಬಳಿ ಇರುವ ಖಾಲಿ ಜಾಗ, ಜೈಲ್ ರಸ್ತೆ, ಚಂದ್ರಪ್ಪ ಕಾಲೇಜ್ ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆ
ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!