Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅದ್ದೂರಿಯಾಗಿ ನೆರವೇರಿದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಬೈಕ್‍ರ್ಯಾಲಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ. ಅಕ್ಟೋಬರ್.05 :
ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ 2023 ರ ಬೃಹತ್ ಶೋಭಾ ಯಾತ್ರೆ ಇದೇ ಅಕ್ಟೋಬರ್ 08 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಗುರುವಾರ ನಗರದಲ್ಲಿ ಬೃಹತ್ ಬೈಕ್ ರ‌್ಯಾಲಿ ನಡೆಸಲಾಯಿತು.

 

ರ‌್ಯಾಲಿ ಉದ್ಘಾಟನೆಯನ್ನು ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳು ಚಾಲನೆ ನೀಡಿದರು. ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್, ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್,  ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.

ಈ ವೇಳೆ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಪ್ರಬಂಜನ್ ಮಾತನಾಡಿ, ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಸಮಸ್ತ ಹಿಂದೂ ಬಾಂಧವರು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಹಿಂದೂಗಳನ್ನು ಜಾಗೃತಿಗೊಳಿಸುವುದು ನಮ್ಮ ಉದ್ದೇಶವಾಗಿದ್ದು, ಸಮಸ್ತರು ಇದನ್ನೆ ಆಹ್ವಾನವೆಂದು ತಿಳಿದು ಶೋಭಾಯಾತ್ರೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

 

 

ಈ ಬೈಕ್ ರ‌್ಯಾಲಿಯು ಹೊಳಲ್ಕೆರೆ ರಸ್ತೆಯ
ಕನಕ ಸರ್ಕಲ್‍ನಿಂದ ಹೊರಟ ಬೈಕ್‍ರ್ಯಾಲಿ ಸಂಗೊಳ್ಳಿರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆಬಾಗಿಲು, ಉಚ್ಚಂಗಿಯಲ್ಲಮ್ಮ ದೇವಸ್ಥಾನ, ರಂಗಯ್ಯನಬಾಗಿಲು, ಜೋಗಿಮಟ್ಟಿ ರೋಡ್, ಬುದ್ದ ಸರ್ಕಲ್, ಚೈತನ್ಯ ಸರ್ಕಲ್, ಬಿ.ಡಿ.ರೋಡ್, ಗಾಂಧಿ ಸರ್ಕಲ್, ಮೆದೇಹಳ್ಳಿ ರೋಡ್, ಎನ್.ಹೆಚ್-ಬೈಪಾಸ್, ಜೆ.ಸಿ.ಆರ್. ವಾಸವಿ ಸರ್ಕಲ್, ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಹಳೆ ಮಾಧ್ಯಮಿಕ ಶಾಲೆ ಆವರಣದಲ್ಲಿ ಮುಕ್ತಾಯಗೊಂಡಿತು. ಈ ರ‌್ಯಾಲಿ ಆರಂಭದಿಂದ ಮುಗಿಯುವ ತನಕ ಮಾರ್ಗದುದ್ದಕ್ಕೂ ಜೈ ಶ್ರೀ ರಾಮ್, ಭಾರತ್ ಮಾತಾ ಕೀ ಜೈ  ಘೋಷಣೆಗಳು ಗಮನಸೆಳೆದವು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ. ರುದ್ರೇಶ್, ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್, ಬಜರಂಗದಳ ಜಿಲ್ಲಾ ಸಂಯೋಜಕರು ಸಂದೀಪ್, ಜಿಲ್ಲಾ ಮುಖಂಡರಾದ ಅಶೋಕ್,ರಾಜೇಶ್, ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ, ಬಜರಂಗದಳ ನಗರ ಸಂಯೋಜಕರು ರಂಗಸ್ವಾಮಿ, ಗ್ರಾಮಾಂತರ ಅಧ್ಯಕ್ಷರಾದ ಶಶಿಧರ್ ಸಮಿತಿಯ ಸದಸ್ಯರಾದ ವಿಪುಲ್ ಜೈನ್, ಕಾರ್ತಿಕ್,  ಅಜಿತ್, ಸೇರಿದಂತೆ ಸಾವಿರಾರು ಮಂದಿ ಈ ಬೈಕ್ ರ‌್ಯಾಲಿಯಲ್ಲಿ  ಭಾಗಿಯಾಗಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment