ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂ. 02 : ನಗರದ 14 ನೇ ವಾರ್ಡಿನಲ್ಲಿ ಅನಧಿಕೃತವಾಗಿ ನಾಮಫಲಕ ಹಾಕುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರಿಂದ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸುವ ಮುಖಾಂತರ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಯಿತು.

ಅನಾದಿಕಾಲದಿಂದ ಇರುವ ಹೊಳಲ್ಕೆರೆ ರಸ್ತೆಯ ಮಾರಮ್ಮನ ದೇವಸ್ಥಾನದ ಪ್ರದೇಶಕ್ಕೆ – ಮಕ್ಕ ಮಸೀದಿ ರಸ್ತೆ ಎಂದು ಹೆಸರು ಬದಲಾವಣೆಯನ್ನು ಮಾಡುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತಪಡಿಸಿ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸುವ ಮುಖಾಂತರ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ. ಪಿ.ರುದ್ರೇಶ್ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರು, ಹಾಗೂ ಪ್ರಮುಖರಾದ ಶ್ರೀನಿವಾಸ್ ಮಂಜುನಾಥ್ , ಚಲವಾದಿ ತಿಪ್ಪೇಸ್ವಾಮಿ ಮತ್ತು 14ನೇ ವಾರ್ಡಿನ ಸ್ಥಳೀಯ ಪ್ರಮುಖರಾದ ಪುನೀತ್, ಆಡಿಟರ್ ಗಂಗಣ್ಣ , ರಾಜ ರಾಜಣ್ಣ , ನವೀನ್ , ಮಂಜು, ಇತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










