ಬೆಂಗಳೂರು: ಹಿಂದೂ ಎಂಬ ಪದ ನಮ್ಮದಲ್ಲ ಎಂಬುದನ್ನು ನಿನ್ನೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದರು. ಈ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಳೀನ್ ಕುಮಾರ್ ಕಟೀಲು ಮಾತನಾಡಿದ್ದು, ಹಿಂದೂ ಎಂಬುದು ಭಾರತದ ಜೀವನ ಪದ್ಧತಿ ಅಂತ ಸುಪ್ರೀಂ ಕೋರ್ಟ್ ತಿಳಿಸಿದೆ. ಸತೀಶ್ ಜಾರಕಿಹೊಳಿ ಸುಪ್ರೀಂಗಿಂತ ದೊಡ್ಡವರ ಎಂದು ಪ್ರಶ್ನಿಸಿದ್ದಾರೆ.
ಹಿಂದು ಎಂಬುದು ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ತಾವೂ ಹಿಂದೂ ವಿರೋಧಿ ಎಂಬುದನ್ನು ಮತ್ತೆ ತೋರಿಸಿದೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಹಿಂದೂಗಳನ್ನು ಈ ರೀತಿಯಲ್ಲಿ ಟೀಕಿಸುವ ಕೆಲಸವನ್ನು ಕಾಂಗ್ರೆಸ್ ಮೊದಲಿನಿಂದಲೂ ಮಾಡಿಕೊಂಡು ಬಂದಿದೆ.
ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂ ಎಂಬುದು ಭಾರತದ ಜೀವನದ ಪದ್ಧತಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾದ್ರೆ ಸತೀಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ಆದೇಶಕ್ಕಿಂತ ದೊಡ್ಡವರ..? ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮ ಇದೊಂದು ಜೀವನ ಪದ್ಧತಿ ಎಂದು ಹೇಳಿದ್ದಾರೆ ಎಂದಿದ್ದಾರೆ.