Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಬೈಕ್ ಮತ್ತು ಕಾರು ಡಿಕ್ಕಿ, ಓರ್ವ ಸಾವು

---Advertisement---

ಸುದ್ದಿಒನ್, ಹಿರಿಯೂರು, ಜೂ.14 :ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ  ಬೈಕ್ ಸವಾರನ ಸಾವನ್ನಪ್ಪಿದ ಘಟನೆ ತಾಲೂಕಿನ ಬ್ಯಾಡರಹಳ್ಳಿ ಸಮೀಪದ ರಂಗಪ್ಪ ಡಾಬಾ ಬಳಿ ನಡೆದಿದೆ.

ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿಯಲ್ಲಿ ಕುಳಿತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತನನ್ನು ಬೇತೂರು ಗ್ರಾಮದ ಬಿ.ಎಸ್. ಮಹಂತೇಶ್ ( 38) ಎಂದು ಗುರುತಿಸಲಾಗಿದೆ. ಗಾಯಾಳು ಜಯಲಕ್ಷ್ಮಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬೇತೂರಿನ ಗ್ರಾಮದ ಬಿ.ಎಸ್. ಮಹಂತೇಶ್ ಮತ್ತು ಈತನ ಹೆಂಡತಿ ಜಯಲಕ್ಷ್ಮಿ ಬೈಕ್ ನಲ್ಲಿ ಹಿರಿಯೂರಿನ ಆಸ್ಪತ್ರೆಗೆ ಬಂದು ಚಿಕಿತ್ಸೆ ಮಾಡಿಸಿಕೊಂಡು ಮರಳಿ ಬೇತೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಸ್ಕಲ್ ಮಾರ್ಗದ ಬ್ಯಾಡರಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಈ ದುರ್ಘಟನೆ ನಡೆದಿದೆ.

ಅಪರಿಚಿತ ಕಾರೊಂದು ಹೊಡೆದುಕೊಂಡು ಹೋಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಮಹಂತೇಶನನ್ನು ಮಾನವೀಯತೆಯಿಂದ ಸಾರ್ವನಿಕರು ಹಿರಿಯೂರಿನ ಆಸ್ಪತ್ರೆಗೆ ತರುವ ದಾರಿ ಮದ್ಯೆ ಅಸುನೀಗಿದ್ದಾನೆ ಎನ್ನಲಾಗಿದೆ. ಹಿಂಬದಿಯ ಗಾಯಾಳು ಜಯಲಕ್ಷ್ಮಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುಲಾಗಿದೆ.

ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...