Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಬಸ್ ದುರಂತ : ಸಾವಿನ ಸಂಖ್ಯೆಯಲ್ಲಿ ಗೊಂದಲಕ್ಕೆ ತೆರೆ, ಐವರು ಸಾವು : ಎಸ್. ಪಿ. ಸ್ಪಷ್ಟನೆ

---Advertisement---

 

ಸುದ್ದಿಒನ್, ಹಿರಿಯೂರು, ಡಿಸೆಂಬರ್. 25 : ತಾಲ್ಲೂಕಿನ ಜವಗೊಂಡನಹಳ್ಳಿ ಸಮೀಪದ ಗೊರ್ಲತ್ತು ಕ್ರಾಸ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ 48 ರಲ್ಲಿ) ಗುರುವಾರ ಮುಂಜಾನೆ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಪ್ರಕರಣದಲ್ಲಿ ಈವರೆಗೂ ಐವರು ಸಾವನ್ನಪ್ಪಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನಡೆದ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಗೊಂದಲ ಉಂಟಾಗಿತ್ತು. ಸ್ಲೀಪರ್ ಬಸ್ ಗೆ ಬೆಂಕಿ ಹೊತ್ತಿಕೊಂಡಾಗ ಮುಂಜಾನೆಯ ಸಮಯವಾಗಿದ್ದರಿಂದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 20 ಮಂದಿ ಮೃತಪಟ್ಟಿದ್ದಾರೆಂದು ನಂತರ 17 ಮಂದಿ, 11 ಮಂದಿ, 9 ಮಂದಿ ಎಂದು ಹೇಳಲಾಗುತ್ತಿತ್ತು. ಘಟನೆ ನಡೆದ ಸ್ಥಳಕ್ಕೆ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ರವಿಕಾಂತೇ ಗೌಡ ಹಾಗೂ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂತಿಮವಾಗಿ ಈ ಘಟನೆಯಲ್ಲಿ ಈವರೆಗೂ ಐವರು ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಗಾಯಾಳುಗಳನ್ನು ಸಿರಾ ಮತ್ತು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದ್ದಾರೆ.
ಮಾಹಿತಿ ಬೇಕಾದವರು : 9480803100 / 9480803170 / 8194222782 ಈ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now