Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಬಸ್ ದುರಂತ : ಮೃತರ ಕುಟುಂಬಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 25 : ಇಂದು ಬೆಳ್ಳಂ ಬೆಳಗ್ಗಯೇ ನಡೆದ ಭೀಕರ ಬಸ್ ದುರಂತಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಈ ಘಟನೆಯಲ್ಲಿ ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ಪರಿಹಾರ
ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ರಾಜ್ಯ ಸರ್ಕಾರವೂ ಸಹಾ ಪರಿಹಾರ ಘೋಷಿಸಿದೆ. ಮೃತರ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಸ್ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ, ಬಳಿಕ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಅದೇ ರೀತಿ, ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ ಮಾಡಿದ್ದಾರೆ.

ದುರಂತಕ್ಕೆ ಈಡಾಗಿರುವ ಸೀಬರ್ಡ್ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಆದರೆ ಹಿರಿಯೂರು ಪಟ್ಟಣದ ಬಳಿ ಎದುರಿಗೆ ಬರುತ್ತಿದ್ದ ಲಾರಿ ಡುವೈಡರ್ ಗೆ ಡಿಕ್ಕಿ ಹೊಡೆದು, ಬಸ್ ಬಂದು ಗುದ್ದಿದೆ. ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಜ್ವಾಲೆ ಜೋರಾಗಿ ಆವರಿಸಿ ಬಸ್ಸಿನಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಜೊತೆಗೆ ಲಾರಿ ಚಾಲಕ ಕೂಡ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 32 ಮಂದಿ ಇದ್ದರು. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಪಘಾತ ಹಿನ್ನೆಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now