Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಉಪ ಚುನಾವಣೆ: ಬಿಜೆಪಿ ಉಸ್ತುವಾರಿಗಳ ಪಟ್ಟಿ ಬಿಡುಗಡೆ ಮಾಡಿದ ಬಿ.ವೈ. ವಿಜಯೇಂದ್ರ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 03 :  ಮುಂಬರುವ ಹಿರಿಯೂರು ವಿಧಾನಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಆದೇಶವನ್ನು ಹೊರಡಿಸಿದ್ದಾರೆ.

ಹಿರಿಯೂರು ಉಪ ಚುನಾವಣೆಗೆ ಉಸ್ತುವಾರಿಗಳಾಗಿ ನೇಮಕವಾಗಿರುವವರೆಂದರೆ ವಿಧಾನ ಪರಿಷತ್ ಸದಸ್ಯರು, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಸಂಸದರು, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರು, ಶಾಸಕರಾದ ಧೀರಜ್ ಮಿನಿರಾಜ್, ಶಾಸಕರಾದ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಸಂಸದರಾದ ಎಸ್.ಮುನಿಸ್ವಾಮಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರು, ಜಿಲ್ಲಾಧ್ಯಕ್ಷರಾದ ಚಿದಾನಂದಗೌಡ ರವರಾಗಿದ್ದಾರೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now