Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಉಪಚುನಾವಣೆ: ಸಿ.ಶಿವುಯಾದವ್‌ಗೆ ಕಾಂಗ್ರೆಸ್ ಟಿಕೆಟ್‌ಗೆ ಜಿಲ್ಲಾ ಯುವ ವಕೀಲರ ವೇದಿಕೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಜು. 24 : ಮುಂದಿನ ದಿನದಲ್ಲಿ ನಡೆಯಲಿರುವ ಹಿರಿಯೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಜಿಲ್ಲಾ ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷರು, ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಶಿವುಯಾದವ್ ರವರಿಗೆ ಕಾಂಗ್ರೆಸ್ ಪಕ್ಷ ಬಿ-ಫಾರಂ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ರವರನ್ನು ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆ ಆಗ್ರಹಿಸಿದೆ.

ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆಯ ಪದಾಧಿಕಾರಿಗಳು, ಸಿ.ಶಿವುಯಾದವ್ ರವರು ಹಿರಿಯ ವಕೀಲರಾಗಿದ್ದು, ಜಿಲ್ಲಾ ಕಾಂಗ್ರೆಸ್‍ನಲ್ಲಿ ಸುಮಾರು 35 ವರ್ಷಗಳಿಂದಲೂ ವಿದ್ಯಾರ್ಥಿ ಕಾಂಗ್ರೆಸ್‍ನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಪಕ್ಷ ಸಂಘಟನೆಗೆ ಸಕ್ರಿಯವಾಗಿ, ಪ್ರಾಮಾಣಿಕವಾಗಿ ತೊಡಗಿಸಿಕೊಂಡಿರುತ್ತಾರೆ. 2014, 2018, 2023ರಲ್ಲಿ ಚಿತ್ರದುರ್ಗ ವಿಧಾನಸಭೆಗೆ ಸ್ಪರ್ಧೆ ಮಾಡಲು ನಾಮಪತ್ರ ಸಲ್ಲಿಸಿದಾಗ ರಾಜ್ಯ ಮತ್ತು ರಾಷ್ಟ್ರ ಮುಖಂಡರು ಭವಿಷ್ಯದಲ್ಲಿ ಸೂಕ್ತ ಸ್ಥಾನಮಾನ ಅವಕಾಶ ನೀಡುವ ಭರವಸೆ ನೀಡಿದ ಹಿನ್ನಲೆಯಲ್ಲಿ ಪಕ್ಷದ ಹಿತದೃಷ್ಠಿಯಿಂದ ತಮ್ಮ ನಾಮಪತ್ರವನ್ನು ವಾಪಾಸ್ಸು ಪಡೆದಿದ್ದರು. ಪಕ್ಷದ ನಿರ್ಧಾರವನ್ನು ಗೌರವಿಸಿ, ಯಾವುದೇ ಅಸಮಾಧಾನ ವ್ಯಕ್ತಪಡಿಸದೇ ನಿಷ್ಠೆಯಿಂದ ಪಕ್ಷ ಸಂಘಟನೆ ಹಾಗೂ ಪಕ್ಷ ಗುರುತಿಸಿದ ಅಭ್ಯರ್ಥಿಗಳ ಗೆಲುವಿಗೆ ನಿರಂತರವಾಗಿ ಶ್ರಮಿಸಿರುತ್ತಾರೆ.

ಸಿ.ಶಿವುಯಾದವ್ ರವರು ಹಿರಿಯೂರು ತಾಲ್ಲೂಕಿನವರಾಗಿದ್ದು, ಬಹುಸಂಖ್ಯಾತ ಸಮಾಜವಾದ ಕಾಡುಗೊಲ್ಲರ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುತ್ತಾರೆ. ಜಿಲ್ಲೆಯಲ್ಲಿ ಅನೇಕ ಜನಪರ ಹೋರಾಟಗಳಲ್ಲಿ, ಪ್ರಗತಿಪರ ಹೋರಾಟಗಳಲ್ಲಿ ಭಾಗವಹಿಸಿರುತ್ತಾರೆ. ಭದ್ರಾ ಮೇಲ್ದಂಡೆ, ರೈಲ್ವೆ ಹೋರಾಟ, ಅಕ್ರಮ ಗಣಿಗಾರಿಕೆ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ. ಆದ್ದರಿಂದ ಪಕ್ಷದ ಮೇಲಿನ ಅವರ ಅಚಲ ನಿಷ್ಠೆ, ತ್ಯಾಗ, ಸೇವೆ ಹಾಗೂ ಹಿರಿಯೂರು ಕ್ಷೇತ್ರದಲ್ಲಿ ಅವರು ಹೊಂದಿರುವ ಜನಬೆಂಬಲವನ್ನು ಪರಿಗಣಿಸಿ ಈ ಬಾರಿ ನಡೆಯಲಿರುವ ಹಿರಿಯೂರು ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಸಿ.ಶಿವುಯಾದವ್ ರವರಿಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ-ಫಾರಂ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆ ಮನವಿ ಮಾಡಿದ್ದಾರೆ.

ಇತ್ತೀಚಿಗೆ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲಿ ವಕೀಲರ ಪ್ರತಿನಿಧಿತ್ವ ಗಣನೀಯಾಗಿ ಕಡಿಮೆಯಾಗಿದೆ. ಸಮಾಜದ ಕಾನೂನು ಅರಿವು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕರ ಹಿತ ಕಾಪಾಡುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದಾಗಿದೆ. ಕಾನೂನು ರಚನೆಗಳಲ್ಲಿ ವಕೀಲರು, ಅತ್ಯವಶ್ಯಕವಾಗಿರುತ್ತದೆ. ಆ ನಿಟ್ಟಿನಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್‍ಗಳಲ್ಲಿ ವಕೀಲರ ಸಂಖ್ಯೆ ಗಣನೀಯವಾಗಿ ಕ್ಷೀಣಿಸಿರುತ್ತದೆ. ಜನಪ್ರತಿನಿಧಿಗಳಿಗೆ ಕಾನೂನಿನ ಅರಿವು ಅತ್ಯವಶ್ಯಕವಾಗಿರುತ್ತದೆ. ಹಿರಿಯ ವಕೀಲರಾದ ಶಿವುಯಾದವ್ ರವರಿಗೆ ಕಾಂಗ್ರೆಸ್ ಪಕ್ಷದಿಂದ ಬಿ-ಫಾರಂ ನೀಡಿದರೆ ಹಿರಿಯೂರಿನಿಂದ ಗೆಲುವು ನಿಶ್ಚಿತ. ಏಕೆಂದರೆ ಸುಮಾರು 30 ವಷರ್Àಗಳಿಂದ ಧರ್ಮಪುರ ತಾಲ್ಲೂಕು ಮತ್ತು ಪೀಡರ್ ಚಾನಲ್ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದು, ಹಿರಿಯೂರು ತಾಲ್ಲೂಕಿನ ಜನಮನಗಳಲ್ಲಿ ಮನೆಮಾತಾಗಿದ್ದಾರೆ. ಶಿವುಯಾದವ್ ರವರು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಮತ್ತು ಹಿರಿತನವನ್ನು ಪರಿಗಣಿಸಿ ಅವರಿಗೆ ಹಿರಿಯೂರು ತಾಲ್ಲೂಕಿನ ಉಪಚುನಾವಣೆಯ ಬಿ-ಫಾರಂ ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ವಕೀಲರ ಯುವ ವೇದಿಕೆಯ ಪರವಾಗಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಯುವ ವಕೀಲರ ವೇದಿಕೆಯ ಚಿಕ್ಕಪ್ಪನಹಳ್ಳಿ  ಶರಣಪ್ಪ ಅಶೋಕ್ ಬೆಳಗಟ್ಟ, ವೆಂಕಟೇಶ್, ಲಕ್ಷ್ಮಿಪತಿ, ತಿಪ್ಪೆರುದ್ರಪ್ಪ, ಮಂಜುಳಾ, ಗುರುಮೂರ್ತಿನಂದಿಹಳ್ಳಿ, ರಾಜಪ್ಪ, ಮೆಹಬೂಬ್ ಬಾಷಾ, ಶಂಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now