ಹಿರಿಯೂರು: ತಾಲ್ಲೂಕಿನ ಹಿಂಡಸಕಟ್ಟೆ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಹಿಂಡಸಕಟ್ಟೆ ಗ್ರಾಮದ ವಿಠಲಪ್ಪ (50) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















