ಸುದ್ದಿಒನ್, ಹಿರಿಯೂರು, ಏಪ್ರಿಲ್. 13 : ತಾಲ್ಲೂಕಿನ ಬಬ್ಬೂರು ಗ್ರಾಮದ ವೈಟ್ ವಾಲ್ ರೆಸಾರ್ಟ್ ಮಾಲೀಕರಾದ ಚೆನ್ನಬಸವಣ್ಣರವರು (76) ಭಾನುವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ, ಹಿರಿಯೂರಿನ ವೈಟ್ ವಾಲ್ ರೆಸಾರ್ಟ್ ಹಿಂಭಾಗದಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.







