ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಹಿರಿಯೂರು, ಮಾರ್ಚ್. 04 : ಜಮೀನು ದಾರಿ ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ ನಡೆದಿದ್ದು,
ಸಿನಿಮೀಯ ಶೈಲಿಯಲ್ಲಿ ಕಲ್ಲು, ದೊಣ್ಣೆ ಹಿಡಿದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ತಾಲ್ಲೂಕಿನ ಭರಮಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,
ಈ ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭರಮಗಿರಿ ಗ್ರಾಮದ ದೇವರಾಜ್, ಮನೋಜ್, ರಮೇಶ್ ಮತ್ತು ಕರಿಯಪ್ಪ ಗಾಯಗೊಂಡವರು. ತಾಲೂಕಿನ ಕುಂಟಪ್ಪನಹಟ್ಟಿ ಹಾಗೂ ತಳವಾರಹಟ್ಟಿ ಗ್ರಾಮದ 20 ಕ್ಕೂ ಹೆಚ್ಚು ಜನರಿಂದ ಈ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

