Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹಿರಿಯೂರು : ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ರಾಜೀನಾಮೆಗೆ ಆಗ್ರಹ

---Advertisement---

ಹಿರಿಯೂರು: ಇತರೆ ಸಮಾಜಗಳಿಗೆ ನ್ಯಾಯ ಕಲ್ಪಿಸುವ ಉದ್ದೇಶದಿಂದ ಅಜಯ್ ಕುಮಾರ್ ಅವರನ್ನು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಚಿವರು ಸೂಚಿಸಿದ್ದಾರೆ. ಆದರೆ ರಾಜೀನಾಮೆ ನೀಡದೇ ಅಧಿಕಾರದ ದುರಾಸೆಯಿಂದ ಸಚಿವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಾಡುಗೊಲ್ಲ ಸಮುದಾಯದ ತಾಲೂಕು ಅಧ್ಯಕ್ಷ ಪಿಆರ್. ದಾಸ್ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲ ಸಮುದಾಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ, ಅಜಯ್ ಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಕೆಪಿಸಿಸಿ ಓಬಿಸಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ತಿಪ್ಪೇಸ್ವಾಮಿ ಮಾತನಾಡಿ ಕಳೆದ 20 ವರ್ಷಗಳಿಂದ ಸಚಿವ ಡಿ ಸುಧಾಕರ್ ಅವರಿಗೆ ಕಾಡುಗೊಲ್ಲರು ಅಥವಾ ಗೊಲ್ಲರು ನಿಮಗೆ ಮತ ನೀಡುವುದಿಲ್ಲ ಅವರನ್ನು ಹತ್ತಿರಕ್ಕೆ ಸೇರಿಸಬೇಡಿ ಎಂದು ಸಚಿವರಿಗೆ ನಮ್ಮ ಸಮುದಾಯದ ವಿರುದ್ಧ ಇಲ್ಲಸಲ್ಲದ ಸುಳ್ಳು ಹೇಳಿ, ದ್ವೇಷ ಸಾಧಿಸುವ ವ್ಯಕ್ತಿ ಅಜಯ್ ಕುಮಾರ್ ‌ಅವರೇ, ನಿನ್ನ ರಾಜಕೀಯ ಲಾಭಕ್ಕಾಗಿ ಸಚಿವರ ವಿರುದ್ಧ ಆರೋಪಗಳನ್ನು ಮಾಡುವುದು ಬಿಡಬೇಕು. ಆರು ತಿಂಗಳ ಅವಧಿಗೆ ನಿಮ್ಮನ್ನು ನಗರಸಭೆ ಅಧ್ಯಕ್ಷರನ್ನಾಗಿ ಮಾಡಲು ಒಡಂಬಡಿಕೆ ಮಾಡಿಕೊಂಡು ಅವಕಾಶ ಕಲ್ಪಿಸಲಾಗಿದೆ. ಬೇರೆಯವರಿಗೆ ಅವಕಾಶ ಕಲ್ಪಿಸಲು ರಾಜೀನಾಮೆ ಕೇಳಿದ್ರೆ ಹಗರಣಗಳನ್ನು ಬಯಲಿಗೆಳೆಯುವೆ ಎಂದು ಹೆದರಿಸುತ್ತಿಯಾ ಎಂದು ಪ್ರಶ್ನಿಸಿದರು. ನಿನ್ನ ಗೊಡ್ಡು ಬೆದರಿಕೆಗೆ ಸಚಿವರು ಬಗ್ಗುವುದಿಲ್ಲ ಮೊದಲು ಈ ಕೂಡಲೇ ರಾಜೀನಾಮೆ ನೀಡಿ ಇರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.

ಜೆಜಿ ಹಳ್ಳಿ ಕೇಶವ್ ಮಾತನಾಡಿ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ತಮ್ಮ ಘನತೆಗೆ ತಕ್ಕಂತೆ ರಾಜೀನಾಮೆ ನೀಡಬೇಕು. ಸಚಿವರ ವಿರುದ್ಧ ಸುಖಾಸುಮ್ಮನೆ ಮನಸಿಗೆ ತೋಚಿದ್ದು ಆರೋಪಗಳನ್ನು ಮಾಡಿದರೆ ನಾವು ಸಹಿಸುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಚಿತ್ರ ಜಿತ್ ಯಾದವ್, ಕಾಂಗ್ರೆಸ್ ಮುಖಂಡ ಬೀರೆನಹಳ್ಳಿ ಷಡಕ್ಷರಿ, ಪಾಲಾಕ್ಷ ಯಾದವ್, ಕಿಟ್ಟಿ, ಮಹೇಶ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...