ಸುದ್ದಿಒನ್, ಹಿರಿಯೂರು, ಆಗಸ್ಟ್. 13 : ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘವು ಸುಮಾರು 4ಸಾವಿರಕ್ಕೂ ಲೀಟರ್ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಈ ಭಾಗದ ರೈತರು ಹೈನುಗಾರಿಕೆಗೆ ಉತ್ತೇಜನ ನೀಡಿರುವುದು ಇತರರಿಗೆ ಮಾದರಿಯಾಗಿದ್ದಾರೆಂದು ಶಿಮುಲ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬಿಎಂಸಿ ಕೇಂದ್ರ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಂಘದ 2024-2025ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಮೂಲ್ ವ್ಯಾಪ್ತಿಯ ಮೂರು ಜಿಲ್ಲೆಗಳ ಒಕ್ಕೂಟಗಳಲ್ಲಿ ಧರ್ಮಪುರ ಸಂಘವು ತನ್ನದೇ ರೀತಿಯಲ್ಲಿ ಹೆಸರು ಗಳಿಸಿದ್ದು, ಅತಿ ಹೆಚ್ಚು ಹಾಲು ಉತ್ಪಾದನೆ ಮಾಡಲಾಗುತ್ತಿದೆ. ಧರ್ಮಪರ ಸಂಘವು ಎರಡು ಬಿಎಂಸಿ ಕೇಂದ್ರಗಳನ್ನು ಹೊಂದಿದ್ದು, ಸಂಘವು ಹದಿನಾಲ್ಕುವರೆ ಲಕ್ಷ ಲಾಭಾಂಶ ಪಡೆಯುವ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಜೊತೆಗೆ ಹಾಲು ಉತ್ಪಾದನೆಯಲ್ಲಿ ಧರ್ಮಪುರ ಚಾಂಪಿಯನ್ ಪಟ್ಟ ಪ್ರಶಸ್ತಿ ಮೂಡಿಗೆರಿಸಿಕೊಂಡಿದೆ. ಈ ಭಾಗದ ಹಾಲು ಉತ್ಪಾದಕರಿಗೆ ಸಂಘದಿಂದ ಎರಡು ರೂಪಾಯಿ ಪ್ರೋತ್ಸಾಹ ಧನ ನೀಡಿ ಶ್ಲಾಘನೀಯ ಕಾರ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸಂಘ ಲಾಭದಾಯಕವಾಗಿರುವುದರಿಂದ ಹಾಲು ಉತ್ಪಾದಕ ರೈತರಿಗೆ ಚಾಪ್ ಕಟ್ಟರ್ ಮಾದರಿಯಾಗಿ ಎಂದು ಸಲಹೆ ನೀಡಿದರು. ಸಂಘವು ಇನ್ನು ಹೆಚ್ಚು ಹೆಚ್ಚು ಅಭಿವೃದ್ಧಿಯಾಗಲಿ ಶಿಮೂಲ್ ಒಕ್ಕೂಟದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ರೈತರ ಹಸುಗಳಿಗೆ ವಿಮೆ ಸೌಲಭ್ಯ ಮಾಡಲಾಗುತ್ತಿತ್ತು. ಇದೀಗ ಬೇರೆ ವಿಮೆ ಕಂಪನಿ ಬದಲಾವಣೆಯಾಗಿದ್ದು, ಆಕಸ್ಮಿಕವಾಗಿ ಮೃತಪಟ್ಟ ಹಸುಗಳ ಪೂರ್ತಿ ಹಣವನ್ನು ಇನ್ಸುರೆನ್ಸೊ ಮೂಲಕ ನೀಡಲಾಗುವುದು. ಕೃಷಿ ಇಲಾಖೆ ಸಹಯೋಗದೊಂದಿಗೆ, ಪಹಣಿ ಹೊಂದಿದ ರೈತರಿಗೆ, ಹಸುಗಳನ್ನು ಕೊಳ್ಳಲು 20 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದೇವೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಹೊಸದುರ್ಗ ವಿಭಾಗದ ನಿರ್ದೇಶಕ ಬಿಆರ್. ರವಿಕುಮಾರ್ ಮಾತನಾಡಿ ಹೈನುಗಾರಿಕೆಯಲ್ಲಿ ಧರ್ಮಪುರ ಪ್ರಖ್ಯಾತಿ ಪಡೆದಿದೆ. ರಾಜ್ಯದಲ್ಲಿ ಧರ್ಮಪುರ ಎರಡು ಬಿಎಂಸಿ ಕೇಂದ್ರ ತೆರೆಯುವ ಮೂಲಕ ರಾಜ್ಯದಲ್ಲಿ ಧರ್ಮಪುರ ಸಂಘ ಗುರುತಿಸಿಕೊಂಡಿದ್ದು, ಇತರೇ ಸಂಘಗಳಿಗೆ ಮಾದರಿಯಾಗಿದೆ.
ಒಕ್ಕೂಟದಿಂದ ನೀಡುವ ಮಾರ್ಗದರ್ಶನದಲ್ಲಿ ಹಸು ಮತ್ತು ಕರುಗಳನ್ನು ಬೆಳೆಸಿದರೆ ರೈತರು ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ. ಇದನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಸಂಘಕ್ಕೆ ಗುಣಮಟ್ಟದ ಹಾಲು, ಸರಬರಾಜು ಮಾಡಿದ ಮೂವರು ರೈತರು ಹಾಗೂ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್.ಪಿ ದಿನೇಶ್, ನಿರ್ದೇಶಕರಾದ ಆರ್. ಭದ್ರಚಾಲಪ್ಪ, ಕುಮಾರ್, ಮಹಲಿಂಗಪ್ಪ, ಮಂಜುನಾಥ್, ಜ್ಯೋತಿ, ಲತಾ, ಶಿಮುಲ್ ಸಿಬ್ಬಂದಿಗಳಾದ ಕೆ. ಕೃಷ್ಣಕುಮಾರ್, ಪುಟ್ಟರಾಜು, ರವಿಚಂದ್ರನ್, ಭೂತೇಶ್, ಸಂಘದ ನಿರ್ದೇಶಕರು ಸೇರಿದಂತೆ ಹಾಲು ಉತ್ಪಾದಕರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















