ಸುದ್ದಿಒನ್, ಹಿರಿಯೂರು, ಮಾರ್ಚ್. 07 : ಜೆಜಿ ಹಳ್ಳಿ ಹೋಬಳಿಯ ಕೆರೆಗಳಿಗೆ ವಿವಿ ಸಾಗರದಿಂದ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೂರು ದಿನಗಳಿಂದ ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯುತ್ತಿದೆ. ಇದೀಗ ಅಸ್ವಸ್ಥರಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ.

ನಿನ್ನೆ ಸಂಜೆ ವೇಳೆ ಧರಣಿ ನಡೆಸುತಿದ್ದ ರೈತ ಈರಣ್ಣ( 70) ಅಸ್ವಸ್ಥರಾಗಿದ್ದರು. ಇಂದು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ( 48) ಮತ್ತು ತಿಮ್ಮಣ್ಣ ಅಸ್ವಸ್ಥರಾಗಿದ್ದು ಈ ಮೂಲಕ ಅಸ್ವಸ್ಥರಾದ ರೈತರ ಸಂಖೆ ಮೂರಕ್ಕೇರಿದೆ.
ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.

ರೈತರನ್ನು ಮನವೊಲಿಸಲು ನಿನ್ನೆ ಸ್ಥಳಕ್ಕೆ ವಿಶ್ವೇಶ್ವರಯ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಭೇಟಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ರೈತರು ತಮ್ಮ ಪಟ್ಟನ್ನು ಸಡಿಲಿಸಲೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಸ್ಥಳಕ್ಕೆ ಆಗಮಿಸಬೇಕೆಂದು ಬಿಗಿ ಪಟ್ಟು ಹಿಡಿದಿದ್ದಾರೆ.

