ಸುದ್ದಿಒನ್, ಹಿರಿಯೂರು, ಮಾರ್ಚ್. 06 : ಜೆಜಿ ಹಳ್ಳಿ ಹೋಬಳಿಯ ಕೆರೆಗಳಿಗೆ ವಿವಿ ಸಾಗರದಿಂದ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎರಡು ದಿನಗಳಿಂದ ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯುತ್ತಿದೆ. ಈ ವೇಳೆ ಧರಣಿ ನಡೆಸುತಿದ್ದ ರೈತ ಈರಣ್ಣ( 70) ಅಸ್ವಸ್ಥರಾಗಿ ಬಿದ್ದ ಘಟನೆ ನಡೆದಿದೆ.

ಅಸ್ವಸ್ಥ ರೈತನ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈತರನ್ನು ಮನವೊಲಿಸಲು ಸ್ಥಳಕ್ಕೆ ವಿಶ್ವೇಶ್ವರಯ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಭೇಟಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರೂ ರೈತರು ತಮ್ಮ ಪಟ್ಟನ್ನು ಸಡಿಲಿಸಲೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಸ್ಥಳಕ್ಕೆ ಆಗಮಿಸಬೇಕೆಂದು ಬಿಗಿ ಪಟ್ಟು ಹಿಡಿದಿದ್ದಾರೆ.


