ಸುದ್ದಿಒನ್, ಹಿರಿಯೂರು, ಜನವರಿ. 10 : ತಾಲ್ಲೂಕಿನ ಹಿಂಡಸಕಟ್ಟೆ ಗೇಟ್ ಸಮೀಪ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಇಂದು ರಾತ್ರಿ (ಜನವರಿ. 10) 10 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್(22 ವರ್ಷ), ನಂಜುಂಡಿ(23 ವರ್ಷ), ರಾಹುಲ್(23 ವರ್ಷ) ಮತ್ತು ಯಶ್ವಂತ್ (22 ವರ್ಷ) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















