ಹಿರಿಯೂರು : ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

0 Min Read

ಸುದ್ದಿಒನ್, ಹಿರಿಯೂರು, ಮಾರ್ಚ್. 27 : ಆಟವಾಡುತ್ತಿದ್ದ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆ ಹಾಲುಮಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಹಾಲುಮಾದೇನಹಳ್ಳಿ ಗ್ರಾಮದಲ್ಲಿ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಹುಣಸೆ ಮರದಡಿಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಬುಧವಾರ ಸಂಜೆ 4 ಗಂಟೆ ಸಮಯದಲ್ಲಿ ಮನೆಗೆ ಕರೆದುಕೊಂಡು ಹೋಗಿ ಅದೇ ಗ್ರಾಮದ ರಮೇಶ್ ಎಂಬಾತ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನ ವಿರುದ್ಧ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *