ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಹಿರಿಯೂರು, ಜೂನ್. 15 : ಮನೆಯಲ್ಲಿ ಯಾರು ಇಲ್ಲದ್ದನ್ನು ನೋಡಿ, ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಗೂಳ್ಯ ಗೊಲ್ಲರಹಟ್ಟಿ ಗ್ರಾಮದಲ್ಲಿನಡೆದಿದೆ.
ಗೂಳ್ಯಾ ಗ್ರಾಮದ ಮಾರುತಿ ಎಂಬುವವರ ಮನೆಯಲ್ಲಿ ಕಳ್ಳತನ ವಾಗಿದ್ದು, ಮನೆಯಲ್ಲಿ ದಂಪತಿ ಸಮೇತ ಚಿತ್ರದುರ್ಗಕ್ಕೆ ಆಸ್ಪತ್ರೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಮನೆಯಲ್ಲಿದ್ದ 25 ಸಾವಿರ ನಗದು ಹಣ ಹಾಗೂ 60 ಗ್ರಾಂ ತೂಕದ ಚಿನ್ನಾಭರಣ ಕದ್ದು ಕಳ್ಳರು ಪಾರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.











