ಸುದ್ದಿಒನ್, ಹಿರಿಯೂರು, ನವೆಂಬರ್.26 :ಖಾಸಗಿ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದಲ್ಲಿ ಸಂಭವಿಸಿದೆ.
ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ.
ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಇದರಿಂದ ಬಾರೀ ಅನಾಹುತ ತಪ್ಪಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















