Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಐಮಂಗಲ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು, 26 ಮಂದಿಗೆ ಗಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್ 21: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಟ್ರಾವೆಲ್ಸ್ ಬಸ್ ನ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿದ್ದು, 26 ಮಂದಿ ಗಾಯಗೊಂಡಿದ್ದಾರೆ.

ಇಂದು ಬೆಳಗಿನ ಜಾವ ಸುಮಾರು 5.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಮೃತಪಟ್ಟಿದ್ದಾರೆ. ಗಾಯಗೊಂಡ 26 ಮಂದಿಯನ್ನು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಸವೇಶ್ವರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ನಲ್ಲಿ ಒಟ್ಟು 56 ಪ್ರಯಾಣಿಕರು ಇದ್ದರು. ಈ ಪೈಕಿ 26 ಮಂದಿ ಗಾಯಗೊಂಡಿದ್ದು, ಉಳಿದ 28 ಮಂದಿ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದಾರೆ.

ಬಸ್ನಲ್ಲಿದ್ದವರು ಬೆಂಗಳೂರಿನ ಬನ್ನೇರ್ಘಟ್ಟ ರಸ್ತೆಯ ಅರಿಕೆರೆಯಲ್ಲಿರುವ ಯೂನಿವರ್ಸಲ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆಗಸ್ಟ್ 16ರಂದು ಗೋವಾ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು.
ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕನಿಗೆ ನಿದ್ದೆ ಮಂಪರು ಆವರಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now