ಸುದ್ದಿಒನ್, ಹಿರಿಯೂರು, ಆಗಸ್ಟ್. 06 : ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಒಳಹರಿವಿನಲ್ಲಿ ಸ್ವಲ್ಪ ಏರಿಕೆಯಾಗಿದ್ದು, ಇಂದು ಜಲಾಶಯಕ್ಕೆ 1900 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದ್ದು, ಇದರಿಂದ ಪ್ರಸ್ತುತ ಜಲಾಶಯ ನೀರಿನ ಮಟ್ಟ 123.70ಅಡಿ ತಲುಪಿದೆ. ಮಂಗಳವಾರ 1220 ಕ್ಯೂಸೆಕ್ ನೀರು ಹರಿದು ಬಂದಿತ್ತು. ಇಂದು 1900 ಕ್ಯೂಸೆಕ್ ಅಂದರೆ 680 ಕ್ಯೂಸೆಕ್ ನೀರು ಏರಿಕೆ ಕಂಡಿದೆ.
ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆ ಬಾರೀ ಅವಾಂತರ ಸೃಷ್ಟಿಸಿದೆ. ಹಿರಿಯೂರು ನಗರದ ಸಿಎಂ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇನ್ನು ಮಳೆಯ ಆರ್ಭಟಕ್ಕೆ ಕೆರೆ ಕಟ್ಟೆಗಳು, ಕೃಷಿ ಹೊಂಡಗಳು ಸೇರಿದಂತೆ ಹಳ್ಳಕೊಳ್ಳ ಭರ್ತಿಯಾಗಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















