ಹಿರಿಯೂರು : ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಖಚಿತ ಮಾಹಿತಿ ಮೇರೆಗೆ, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 6 ಮಂದಿ ಜೂಜುಕೊರರನ್ನು ಬಂಧಿಸಿದ ಘಟನೆ ಭಾನುವಾರ ಸಂಜೆ ಆಲೂರು ಗ್ರಾಮದಲ್ಲಿ ನಡೆದಿದೆ.

ಬಂಧಿತರಿಂದ 24,500 ರೂಪಾಯಿ ನಗದು ಮತ್ತು ಆಟಕ್ಕೆ ಬಳಸಿದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


