ಹಿರಿಯೂರು | ಜವಗೊಂಡನಹಳ್ಳಿ ಪಿ.ಡಿ.ಒ. ಅಮಾನತು : ಜಿ.ಪಂ. ಸಿಇಒ  ಆದೇಶ

1 Min Read

ಚಿತ್ರದುರ್ಗ. ಆಗಸ್ಟ್.02 :  ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿಯಲ್ಲಿ 2018-19 ನೇ ಸಾಲಿನಿಂದ 2022-23ನೇ ಸಾಲಿನವರೆಗಿನ ಪಂಚಾಯತಿಯ ಎಲ್ಲಾ ಹಣಕಾಸು, ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕೆಯಡಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪಕ್ಕಾಗಿ

ಜವಗೊಂಡನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಸಿ. ಈಶ್ವರ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಶಶಿಕಾಂತ್ ಅವರು ನೀಡಿರುವ ದೂರಿನ ಮೇರೆಗೆ
ಜವಗೊಂಡನಹಳ್ಳಿ ಗ್ರಾ.ಪಂ. ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಸಿ. ಈಶ್ವರ್ ಅವರು
ಅವ್ಯವಹಾರ ಎಸಗಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯವರಿಗೆ
ದೂರು ನೀಡಿದ್ದರು.

ಈ ದೂರಿನ ಮೇರೆಗೆ ಹಣಕಾಸು, ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕೆಯಲ್ಲಿ ಹಾಗೂ ಇತರೆ ಯೋಜನೆಗಳಡಿ ಬಿಡುಗಡೆಯಾದ ಅನುದಾನಗಳ ವೆಚ್ಚಕ್ಕೆ ಸಂಬಂಧಿಸಿದ ಲೆಕ್ಕ ಪತ್ರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೂ ಲೆಕ್ಕ ತನಿಖೆಗೆ ಹಾಜರುಪಡಿಸಿರುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟವರ ಮೇಲೆ ನಿಯಾಮಾನುಸಾರ ಆಡಳಿತಾತ್ಮಕ ಕ್ರಮ ಕೈಗೊಳ್ಳಬಹುದು ಎಂಬುದಾಗಿ ವರದಿಯನ್ನು ಸಲ್ಲಿಸಿರುತ್ತಾರೆ. ಲಿಖಿತ ಸಮಾಜಾಯಿಷಿಯನ್ನು ಸಲ್ಲಿಸುವಂತೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದರೂ ಇದುವರೆವಿಗೂ ತಮ್ಮ ಲಿಖಿತ ಸಮಜಾಯಿಷಿಯನ್ನು ಸಲ್ಲಿಸಿರುವುದಿಲ್ಲ.

ಒಬ್ಬ ಜವಾಬ್ದಾರಿಯುತ ಸರ್ಕಾರಿ ನೌಕರರಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ನಿಯಮಾನುಸಾರ ಸಿ.ಈಶ್ವರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಒ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *