ಸುದ್ದಿಒನ್, ಹಿರಿಯೂರು, ಜುಲೈ. 29 : ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಅವರ ಮನೆ ಮತ್ತು ಕ್ಲಿನಿಕ್ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಮೀರಿದ ಆಸ್ತಿ , ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ನಗರದ ಯರಗುಂಟೇಶ್ವರ ಬಾಡಾವಣೆಯಲ್ಲಿನ ಅವರ ಮನೆ ಮತ್ತು ತಾಲ್ಲೂಕಿನ ಆದಿವಾಲ ಗ್ರಾಮದ ಅವರ ಕ್ಲಿನಿಕ್ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.









