Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ದೊಡ್ಡಘಟ್ಟದಲ್ಲಿ ಹಾಲು ಉತ್ಪಾದಕರ ಸಂಘ ಉದ್ಘಾಟನೆ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 01 : ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಿಸಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಆಡಳಿತ ಮಂಡಳಿ ಅಧ್ಯಕ್ಷೆ ಜಯಮ್ಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದಲು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಡೈರಿ ಆರಂಭದ ದಿನದಲ್ಲೇ 116 ಲೀಟರ್ ಹಾಲು ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರು ಹಸುಗಳನ್ನು ಸಾಕಿ ಹೆಚ್ಚು ಹಾಲು ಉತ್ಪಾದಿಸುವ ಮೂಲಕ ಸಂಘವನ್ನು ಅಭಿವೃದ್ಧಿಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ವಿಸ್ತರಣಾಧಿಕಾರಿ ಎಸ್.ಜಿ. ಕೃಷ್ಣಕುಮಾರ್, ಉಪಾಧ್ಯಕ್ಷೆ ಉಮಾದೇವಿ, ನಿರ್ದೇಶಕರುಗಳಾದ ಅಂಜಲಿ, ಲತಾ , ಪ್ರೇಮ, ಸುಮಿತ್ರಮ್ಮ, ಕಾವ್ಯ, ತಿಮ್ಮಕ್ಕ, ಪುಷ್ಪಲತಾ, ಭಾಗ್ಯಲಕ್ಷ್ಮಿ, ಕಾರ್ಯದರ್ಶಿ ಭೂಮಿಕಾ ಹಾಗೂ ಗ್ರಾಮಸ್ಥರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment