Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಭದ್ರೆಗೆ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ ಸಚಿವ ಚಲುವರಾಯಸ್ವಾಮಿ, ರಘುಮೂರ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಜಲಸಂಪನ್ಮೂಲ ಸಚಿವ ಎನ್.ಚಲುವರಾಯ‌ಸ್ವಾಮಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅವರು ಇಂದು ಹಿರಿಯೂರು ತಾಲ್ಲೂಕಿನ ಆದಿರಾಳು ಗ್ರಾಮದ ಗೋಕಟ್ಟೆ ಬಳಿ ಭದ್ರೆಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಚಿತ್ರದುರ್ಗ ಬ್ರಾಂಚ್ ಕೆನಾಲ್‌ ಮೂಲಕ ಪ್ರಾಯೋಗಿಕವಾಗಿ ಹರಿಸಲಾಗುತ್ತಿರುವ ಭದ್ರಾ ನೀರಿನಲ್ಲಿ, ಕೆನಾಲ್‌ನ 87.740 ಕಿ.ಮೀ ಬಳಿಯ ಔಟ್ ಲೆಟ್ ನಿಂದ ಹಿರಿಯೂರು ತಾಲ್ಲೂಕಿನ ಸೂರಗೊಂಡಹಳ್ಳಿ ಹಾಗೂ ತವಂದ ಎರದಕಟ್ಟೆ ಕೆರೆಗಳಿಗೆ ನೈಸರ್ಗಿಕ ಹಳ್ಳದ ಮೂಲಕವೇ ಭದ್ರಾ ನೀರು ಹರಿಸಲಾಗುತ್ತಿದೆ.

ಒಟ್ಟು 17 ಕಿ.ಮೀ. ಉದ್ದದ ನೈಸರ್ಗಿಕ ಹಳ್ಳದ ಹಾದಿಯಲ್ಲಿರುವ ಕೆ.ಸಿ‌.ರೊಪ್ಪ, ಮಲ್ಲರಸನಹಟ್ಟಿ, ಆದಿರಾಳು, ಸಿ‌.ಎನ್.ಮಾಳಿಗೆ, ಹುಳಿ ತೊಟ್ಟಿಲು, ಸೂರಗೊಂಡಹಳ್ಳಿ ಹಾಗೂ ತವಂದಿ ಎರದಕಟ್ಟೆ ವರೆಗಿನ ಸುಮಾರು 6 ಚೆಕ್ ಡ್ಯಾಮ್, 3 ಗೋ ಕಟ್ಟೆಗಳು ಹಾಗೂ ಹಲವು ಎಕೆರಗಳು ಭದ್ರಾ ನೀರಿಂದ ಭರ್ತಿಯಾಗಿಲಿವೆ.

ಇದೆ ವೇಳೆ ಸಚಿವ ಎನ್.ಚಲುವರಾಯಸ್ವಾಮಿ ಕೋವೇರಹಟ್ಟಿ ಬಳಿ ಭದ್ರಾ ಕೆನಾಲ್ ಕಾಮಗಾರಿ ವೀಕ್ಷಿಸಿದರು. ಈ ವೇಳೆ ವಿಶೇಶ್ವರ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಸಿ.ರಮೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾಧಿಕಾರಿ ಎಸ್.ರಮ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ರವಿಶಂಕರ್, ಅಧೀಕ್ಷಕ ಇಂಜಿನಿಯರ್ ಹರೀಶ್ ಸೇರಿದಂತೆ ಮುಖಂಡರು ಉಪಸ್ಥಿರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now