Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಮೇ16: ಹಿರಿಯೂರು ನಗರಸಭೆ ವತಿಯಿಂದ 2026-27ನೇ ಸಾಲಿನ ಹಾಗೂ 2023-24 ರಿಂದ 2025-26ರ ವರೆಗಿನ ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

 

ಹಿರಿಯೂರು ನಗರ ವ್ಯಾಪ್ತಿಯಲ್ಲಿ ಬರುವ ಇತರ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ದಿವ್ಯಾಂಗ (ವಿಕಲಚೇತನ) ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು. ಇದರೊಂದಿಗೆ ದಿವ್ಯಾಂಗ ಚೇತನರು ನಿವೇಶನ ಖರೀದಿಸಲು ಆರ್ಥಿಕ ಸಹಾಯಧನ ಒದಗಿಸಲಾಗುವುದು ಮತ್ತು ಎಲ್.ಎಲ್.ಬಿ ಪದವಿ ಮುಗಿಸಿ, ವಕೀಲಿ ವೃತ್ತಿಯಲ್ಲಿ ನಿರತರಾಗಿರುವ ದಿವ್ಯಾಂಗ ಚೇತನರಿಗೆ ಕಾನೂನು ಪುಸ್ತಕಗಳನ್ನು ಖರೀದಿಸಲು ಆರ್ಥಿಕ ಸಹಾಯಧನ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 

ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಸಾರ್ವಜನಿಕರು ಹಿರಿಯೂರು ನಗರಸಭೆ ಕಾರ್ಯಾಲಯವನ್ನು ಅಥವಾ ವೆಬ್‍ಸೈಟ್ www.hiriyurcity.gov.in  ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯೂರು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now