ಸುದ್ದಿಒನ್, ಹಿರಿಯೂರು, ಜುಲೈ. 14 : ಇಲ್ಲಿನ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಿಜೆಪಿ ಸದಸ್ಯನಿಗೆ ಅಧ್ಯಕ್ಷ ಹುದ್ದೆ ಒಲಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕೆ. ಅಭಿನಂದನ್ ತಿಳಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಬುಧವಾರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಿಜೆಪಿ ಪಕ್ಷದಿಂದ ಗೆದ್ದಿರುವ ಸದಸ್ಯರನ್ನು ನಗರಸಭೆ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ಕ್ಷೇತ್ರ ಹಾಗೂ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಹಿರಿಯೂರು ನಗರಸಭೆಯ ಬಿಜೆಪಿ ಸದಸ್ಯನಿಗೆ ಅಧ್ಯಕ್ಷ ಪಟ್ಟ ಸಿಗುವ ಲಕ್ಷಣಗಳು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ನಗರಸಭೆ ಅಧ್ಯಕ್ಷ ಸ್ಥಾನ ಬಿಜೆಪಿಗೆ ಲಭಿಸಿದರೆ ಪಕ್ಷಕ್ಕೆ ಮತ್ತೊಷ್ಷು ಶಕ್ತಿ ಬರಲಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











