Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ನಗರಸಭೆಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ: ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜೂನ್11:   ಹಿರಿಯೂರು ನಗರಸಭೆ ವತಿಯಿಂದ 2026-27ನೇ ಸಾಲಿನ ನಗರಸಭೆ ನಿಧಿಯಡಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ನಗರಸಭೆಯ ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ಮೀಸಲಿರಿಸಿರುವ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯಡಿ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುತ್ತದೆ. ಜೊತೆಗೆ ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ವಿತರಿಸಲಾಗುತ್ತದೆ. ಅರ್ಹ ದಿವ್ಯಾಂಗ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಕಾರ್ಯಕ್ರಮವೂ ಇದರಲ್ಲಿದೆ. ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ಸಾರ್ವಜನಿಕರಿಗೆ ನಿವೇಶನ ಖರೀದಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ.

 

ಇದರೊಂದಿಗೆ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಖಾಯಂ, ನೇರಪಾವತಿ, ಕ್ಷೇಮಾಭಿವೃದ್ಧಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರು, ಲೋಡರ್ಸ್ ಮತ್ತು ಡ್ರೈವರ್‍ಗಳಿಗೂ ಸಹ ನಿವೇಶನ ಖರೀದಿಸಲು ಸಹಾಯಧನ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಫಲಾನುಭವಿಗಳು  ಇದೇ ಜೂನ್ 12 ರಿಂದ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹಿರಿಯೂರು ನಗರಸಭೆ ವ್ಯಾಪ್ತಿಯ ಅರ್ಹ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯೂರು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now