Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಕರ್ತವ್ಯದ ನಿರ್ಲಕ್ಷ್ಯ ಪಿಡಿಒ ಅಮಾನತು

---Advertisement---

ಚಿತ್ರದುರ್ಗ. ನ.12: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಗ್ರಾಮ ಪಂಚಾಯಿತಿಗೆ ಸಂಬAಧಿಸಿದ 15 ಹಣಕಾಸಿನ ಖರ್ಚು ವೆಚ್ಚದ ಮಾಹಿತಿಯನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನೀಡದೆ ಉದ್ಧಟನವನ್ನು ತೋರುವುದರ ಜೊತೆಗೆ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾದ ತನಿಖಾ ತಂಡ ಆಡಿಟ್ ನಡೆಸಲು ಸೂಕ್ತ ದಾಖಲೆಗಳನ್ನು ನೀಡದೆ ಬೇಜವಬ್ದಾರಿಯನ್ನು ಪಿಡಿಓ ಸಿ.ಈಶ್ವರ ಪ್ರದರ್ಶಿಸಿದ್ದಾರೆ. ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ. ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಮಾವಳಿಗಳು-1966 ನಿಯಮ-3(I)(II)&(III) ಉಲ್ಲಂಘಿಸಿದ ಕಾರಣ ಪಿಡಿಓ ಸಿ.ಈಶ್ವರ್ ಅವರನ್ನು ಅಮಾನತು ಮಾಡಿರುವುದಾಗಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...