Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಕವಿ ಶಾಂತರಸರ 100 ನೇ ಜನ್ಮಶತಮಾನೋತ್ಸವ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 10 : ಓದುಗರಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬಿತ್ತಿ ಕಥೆ, ಕವಿತೆ, ಕಾದಂಬರಿ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕವಿ ಶಾಂತರಸ ಕೊಡುಗೆ ನೀಡಿದ್ದಾರೆಂದು ಹಿರಿಯೂರಿನ ಜ್ಞಾನಭಾರತಿ ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ.ವಿ.ಬಸವರಾಜ್ ಹೇಳಿದರು.

ಬಹುಮುಖಿ ಕಲಾ ಕೇಂದ್ರ ಚಿತ್ರದುರ್ಗ, ಸಂಸ ಥಿಯೇಟರ್ ಬೆಂಗಳೂರು ಇವರುಗಳ ಸಹಯೋಗದೊಂದಿಗೆ ಹಿರಿಯೂರಿನ ಜ್ಞಾನಭಾರತಿ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಶಾಂತರಸರ 100 ನೇ ಜನ್ಮ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದರು.

ಶಾಂತರಸ ಕವಿಗಳು ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ಜೂನಿಯರ್ ಕಾಲೇಜು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಮಾನವೀಯತೆಯ ಪ್ರತಿಪಾದಕರಾಗಿ ಸೇವೆ ಸಲ್ಲಿಸಿದರು. ಪುಸ್ತಕ ಪ್ರೇಮಿಯಾಗಿದ್ದ ಅವರು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಶಿವಶರಣರ ಮನೋಧರ್ಮವನ್ನು ಉಸಿರಾಗಿಸಿಕೊಂಡು ಕನ್ನಡಪರ ಚಟುವಟಿಕೆಗಳಲ್ಲಿ ಸದಾ ತೊಡಗಿಕೊಳ್ಳುತ್ತಿದ್ದರು. ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿ ದಿಟ್ಟತನ ಮೆರೆದ ಅವರು ನಿಷ್ಟುರವಾದಿಯಾಗಿದ್ದರೆಂದು ಗುಣಗಾನ ಮಾಡಿದರು.

ಉಪನ್ಯಾಸಕ ಸಲಬೊಮ್ಮನಹಳ್ಳಿ ಆರ್.ಶಿವಣ್ಣ ಮಾತನಾಡಿ ಶಾಂತರಸರವರ ಮೂಲ ಹೆಸರು ಶಾಂತಯ್ಯ. ರಾಯಚೂರು ಜಿಲ್ಲೆಯ ಹೆಂಬರಾಳು ಗ್ರಾಮದಲ್ಲಿ 1924 ಏಪ್ರಿಲ್

7 ರಂದು ಜನಿಸಿದರು. ಬ್ರಾಹ್ಮರಾಗಿ ಹುಟ್ಟಿ ಬ್ರಾಹ್ಮಣ್ಯವನ್ನು ತೊರೆದು ಇಲ್ಲಿನ ಕಂಚಾಚಾರ, ರೂಢಿ, ಸಂಪ್ರದಾಯ, ಮೂಢನಂಬಿಕೆಗಳ ವಿರುದ್ದ ಹೋರಾಡಿದರು. ಕನ್ನಡ ಭಾಷೆ ಉಳಿವಿಗಾಗಿ ಆರು ದಶಕಗಳ ಕಾಲ ಚಳುವಳಿಯಲ್ಲಿ ತೊಡಗಿ ಗೋಕಾಕ್ ಚಳುವಳಿಗೆ ಕಾವು ಹಚ್ಚಿದರು. ಕುವೆಂಪು, ಹರಿಹರ ಕವಿಗಳ ಬರವಣಿಗೆ ಇವರ ಮೇಲೆ ಗಾಢ ಪ್ರಭಾವ ಬೀರಿತು ಎಂದು ಸ್ಮರಿಸಿದರು.

ಉದಯೋನ್ಮುಖ ಬರಹಗಾರರನ್ನು ಉತ್ತೇಜಿಸಲು ಸತ್ಯ ಸ್ನೇಹಿ ಎಂಬ ಪ್ರಕಾಶನ ಆರಂಭಿಸಿ 50 ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ನಾಡಿಗೆ ಸಮರ್ಪಿಸಿದರು. 1942 ರಲ್ಲಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2006 ರಲ್ಲಿ ಬೀದರ್‍ನಲ್ಲಿ ನಡೆದ 72 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆನ್ನುವುದನ್ನು ನೆನಪಿಸಿಕೊಂಡರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ರಂಗಸ್ವಾಮಿ ಸಕ್ಕರ ಮಾತನಾಡಿ ಕವಿ ಶಾಂತರಸ ವೃತ್ತಿಯಲ್ಲಿ ಶಿಕ್ಷಕರಾಗಿ, ಉಪನ್ಯಾಸಕರಾಗಿ
ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರವೃತ್ತಿಯಲ್ಲಿ ಸಾಹಿತಿಗಳಾಗಿ ಬರಹಗಾರರಾಗಿ ರಾಜ್ಯದಲ್ಲಿ ಗುರುತಿಸಿಕೊಂಡವರು ಎಂದು ಗುಣಗಾನ ಮಾಡಿದರು.

ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎನ್.ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಖ್ಯಾತ ರಂಗಕರ್ಮಿ ಮಲ್ಲಪ್ಪನಹಳ್ಳಿ ಮಹಾಲಿಂಗಪ್ಪ, ಬಹುಮುಖಿ ಕಲಾ ಕೇಂದ್ರದ ಕಾರ್ಯದರ್ಶಿ ಟಿ.ಮಧು, ಟಿ.ಶ್ರೀನಿವಾಸಮೂರ್ತಿ, ದೊರೇಶ್ ಹಾಗೂ ಇನ್ನಿತರರು ಹಾಜರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment