ಹಿರಿಯೂರು. ಏ.07: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಿರಿಯೂರು ಪಟ್ಟಣದಲ್ಲಿ ಟಿ.ಬಿ ಸರ್ಕಲ್‍ನಿಂದ ಹುಳಿಯಾರ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಿರಿಯೂರು 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-09 ಹುಳಿಯಾರ್ ರೋಡ್ ಮತ್ತು ಎಫ್-03 ಎನ್.ಜೆ.ವೈ ದೊಡ್ಡಘಟ್ಟ 11 ಕೆ.ವಿ ಮಾರ್ಗಗಳಿಗೆ ಇದೇ ಏಪ್ರಿಲ್ 8 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹಿರಿಯೂರು ಪಟ್ಟಣದ ಆವಧಾನಿನಗರ, ಗಾಂಧಿನಗರ, ತಾಲ್ಲೂಕು ಕಛೇರಿ, ಹುಳಿಯೂರು ರಸ್ತೆ ಲಕ್ಷ್ಮಮ್ಮಬಡಾವಣೆ, ಎಲ್‍ಐಸಿ ಬಡಾವಣೆ, ಹರಿಶ್ಚಂದ್ರ ಘಾಟ್, ಲಕ್ಕವ್ವನಹಳ್ಳಿ, ದೊಡ್ಡಘಡ್ಡ, ಸೀಗೇಹಳ್ಳಿ ಹಾಗೂ ಸುತ್ತ-ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






