Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಜವನಗೊಂಡನಹಳ್ಳಿಯಲ್ಲಿ ಏ. 20 ರಂದು ರಮಾನಂದ ಶ್ರೀಗೆ ಬೆಳ್ಳಿಕಿರೀಟ ಧಾರಣೆ, ನಾಟಕೋತ್ಸವ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 10 :
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಏಪ್ರಿಲ್ 20 ರಂದು ಡಾ. ಶ್ರೀ ಬಸವ ರಮಾನಂದ ಮಹಾಸ್ವಾಮೀಜಿರವರಿಗೆ ಬೆಳ್ಳಿಕಿರಿಟ ಧಾರಣೆ, ಗುರುವಂದನಾ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಸಂಧಾನ ನಾಟಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಲಾವಿದರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿ. ಬಿ. ಪಾಪಣ್ಣ ತಿಳಿಸಿದ್ದಾರೆ.

ಡಾಬಸ್ ಪೇಟೆಯ ಶ್ರೀ ವನಕಲ್ಲು ಮಲ್ಲೇಶ್ವರ ಮಹಾ ಸಂಸ್ಥಾನ ಮಠದ ಡಾ. ಶ್ರೀ ರಮಾನಂದ ಮಹಾ ಸ್ವಾಮಿಜಿ ಅವರು 25 ಪದವಿಗಳನ್ನು ಪಡೆದು ಧಾಖಲೆ ನಿರ್ಮಿಸಿ ಸಮಾಜವನ್ನು ಉತ್ತಮ ರೀರಿಯಲ್ಲಿ ಕೊಂಡೋಯು ತ್ತಿರುವ ಹಿನ್ನಲೆಯಲ್ಲಿ ಅವರಿಗೆ ಬೆಳ್ಳಿ ಕಿರೀಟ ಧಾರಣೆ ಮಾಡಿ ಗೌರವ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್, ಮಾಜಿ ಸಚಿವರಾದ  ಟಿ.ಬಿ. ಜಯಚಂದ್ರ, ಕೆ. ಎನ್. ರಾಜಣ್ಣ,ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಹಲವಾರು ಮುಖಂಡರು, ಜನಪ್ರತಿನಿದಿನಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಡಾ. ಶ್ರೀ ಬಸವ ಯಾದವನಂದ ಮಹಾ ಸ್ವಾಮಿಗಳು ,ಶ್ರೀ ನಿರಂಜನನಂದಪುರಿ ಮಹಾಸ್ವಾಮಿಗಳು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳುಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮಿಗಳುಶ್ರೀ ವಾಲ್ಮೀಕಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಶ್ರೀ ಬಸವ ಕುಮಾರ ಮಹಾಸ್ವಾಮಿಗಳುಶ್ರೀ ರೇಣುಕಾನಂದ ಮಹಾಸ್ವಾಮಿಗಳುಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಡಾ. ಶ್ರೀ ಬಸವಪ್ರಭು ಮಹಾಸ್ವಾಮಿಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠದ ಸ್ವಾಮಿಜಿಗಳು ಭಾಗವಹಿಸಲಿದ್ದಾರೆ.

ಇದೊಂದು ಚಾರಿತ್ರಿಕ ಕಾರ್ಯಕ್ರಮವಾಗಿದ್ದು, ಅದೇ ದಿನ ಶ್ರೀ ಕೃಷ್ಣ ಸಂದಾನ ನಾಟಕೋತ್ಸವವೂ ಇದ್ದು, ಶ್ರೀಕೃಷ್ಣನ ಪಾತ್ರದಲ್ಲಿ ಜಿ. ಪಂ. ಮಾಜಿ ಸದಸ್ಯ ಸಿ. ಬಿ. ಪಾಪಣ್ಣ ಅಭಿನಯಿಸುತ್ತಿರುವುದು ವಿಶೇಷ. ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಮಂದಿ ಭಾಗವಹಿಸುವರು ಎಂದು ಸಿ. ಬಿ. ಪಾಪಣ್ಣ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...