ಹಿರಿಯೂರು | ಗಂಗಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

1 Min Read

 

ಸುದ್ದಿಒನ್, ಹಿರಿಯೂರು, ಆಗಸ್ಟ್.23 : ಗಂಗಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಫುಟ್‌ಬಾಲ್‌ , ಬಾಲಕಿಯರ ವಿಭಾಗದ ಬಾಸ್ಕೆಟ್‌ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದ ಚೆಸ್ ನಲ್ಲಿ ಮಾನ್ಯಶ್ರೀ ಹಾಗೂ ಬಾಲಕರ ವಿಭಾಗದ ಚೆಸ್ ನಲ್ಲಿ ಮಹಮದ್ ಹಯಾದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ, ಬಾಲಕಿಯರ ವಿಭಾಗದ ವಾಲಿಬಾಲ್ ನಲ್ಲಿ ಸುಭಿಕ್ಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಓಬಯ್ಯ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಸಹ ಭಾಗವಹಿಸಿ ಪ್ರಶಸ್ತಿ ಗಳಿಸಲಿ ಎಂದು ಗಂಗಾ ಸೆಂಟ್ರಲ್ ಕಾಲೇಜಿನ ಎಲ್ಲ ಉಪನ್ಯಾಸಕರು ಮತ್ತು ಆಡಳಿತ ಸಿಬ್ಬಂದಿ ಶುಭ ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *