ಸುದ್ದಿಒನ್, ಹಿರಿಯೂರು, ಅಕ್ಟೋಬರ್. 07 : ತಾಲ್ಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಸಂಶಯ ವ್ಯಕ್ತಪಡಿಸಿದ ಗಂಡ, ಹೆಂಡತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟ ಘಟನೆ ನಿನ್ನೆ (ಅಕ್ಟೋಬರ್. 06, ಸೋಮವಾರ) ನಡೆದಿದೆ.
ಮೃತ ಸುನೀತಾ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪತಿ ನಿಂಗಣ್ಣ (28) ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ, ತಹಶೀಲ್ದಾರ್ ಎಂ ಸಿದ್ದೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
