ಹಿರಿಯೂರು | ಕಾರು ಪಲ್ಟಿ ಮಗು ಸೇರಿ ಮೂವರು ಸಾವು

1 Min Read

 

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 03 : ತಾಲ್ಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮಲ್ಲಮ್ಮ (26) ಸರೋಜಮ್ಮ (25) ಎಂದು ಗುರುತಿಸಲಾಗಿದೆ. ಮೃತ ಮಗುವಿನ ಹೆಸರು ತಿಳಿದು ಬಂದಿಲ್ಲ. ಮಗು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಮೃತರು ಯಾದಗಿರಿ ಜಿಲ್ಲೆಯವರಾಗಿದ್ದು, ಚಿತ್ರದುರ್ಗ ಕೋಟೆ ನೋಡಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ, ಪಿಎಸ್ಐ ಅನುಸೂಯಮ್ಮ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Enable Notifications OK No thanks