Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ವಿವಿಧೆಡೆ ಅಪಘಾತ, ಮೂವರ ಸಾವು

---Advertisement---

ಸುದ್ದಿಒನ್, ಹಿರಿಯೂರು, ಮೇ. 29 : ತಾಲೂಕಿನ ವಿವಿಧೆಡೆ ನಡೆದ ರಸ್ತೆ ಅಪಘಾತದಲ್ಲಿ  ಮೂವರು ಸಾವನ್ನಪ್ಪಿದ್ದಾರೆ.

ಯರಬಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ತುಮಕೂರು ಮೂಲದ ನಾಗರಾಜ್ ಶೆಟ್ಟಿ (55) ಹಾಗೂ ವಿಶಾಲಾಕ್ಷಮ್ಮ (75), ಎಂದು ಗುರುತಿಸಲಾಗಿದೆ.

ಮೃತ ನಾಗರಾಜ್ ಶೆಟ್ಟಿ ಮಗಳನ್ನ ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಗೊಂಡವರನ್ನು ಹಿರಿಯೂರಿನ ಸಾರ್ಕರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವ್ಯಕ್ತಿ ಸಾವು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಆದಿವಾಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತನ ದೇಹ ನಜ್ಜುಗುಜ್ಜಾಗಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment