ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಹಿರಿಯೂರು, ಡಿಸೆಂಬರ್. 06 :ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದಾರೆ..
ಈ ಅಪಘಾತದಲ್ಲಿ ಎರಡು ವರ್ಷದ ಮಗು ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿದೆ.
ಹಿರಿಯೂರು ತಾಲ್ಲೂಕಿನ ಬಾಲೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಮಹಮದ್ ಖಲೀಲ್ (25) ಎಂದು ಗುರುತಿಸಲಾಗಿದೆ. ಈತ ಸ್ಥಳದಲ್ಲೆ ಮೃತ ಪಟ್ಟಿದ್ದು, ತಾಯಿ ನೂರ್ ಜಾನ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ 2 ವರ್ಷದ ಮಗು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ PSI ಮಹೇಶ್ ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
