ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ಜೂ.01 : ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಅಶೋಕ್ ಲೇಲ್ಯಾಂಡ್ ಲಗೇಜ್ ವಾಹನ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಆರ್.ಕೆ. ಪವರ್ ಜಿನ್ ಬಳಿ ನಡೆದಿದೆ.
ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಗ್ರಾಮದ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳ್ಳಕೆರೆ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಲಗೇಜ್ ವಾಹನದಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್