ಚಿತ್ರದುರ್ಗ, ಎಪ್ರಿಲ್.01 : ಅನಧಿಕೃತ ಗೈರು ಹಾಗೂ ಕರ್ತವ್ಯದ ವೇಳೆ ಪಾನಮತ್ತರಾಗಿ ಮೇಲಾಧಿಕಾರಿಗಳೊಂದಿಗೆ ಅನುಚಿತ ವರ್ತನೆ ತೋರಿದ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಎಸ್.ಸಿದ್ದೇಶ್ವರ ಅವರನ್ನು ಅಮಾನತುಗೊಳಿಸಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಎಸ್.ಸಿದ್ದೇಶ್ವರ ಅವರಿಗೆ ಈ ಕುರಿತು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಮೇಲಾಧಿಕಾರಿಗಳು ಸೂಚನೆಗಳನ್ನು ಸಹ ನೀಡಿದ್ದರು. ಆದರೂ ಎಸ್.ಸಿದ್ದೇಶ್ವರ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ತೋರಲಿಲ್ಲ. ಆದ ಕಾರಣ ಆಡಳಿತಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನಲೆಯಲ್ಲಿ ಜಿ.ಪಂ.ಸಿಇಓ ಹಾಗೂ ಶಿಸ್ತು ಪ್ರಾಧಿಕಾರದ ಅಧಿಕಾರಿಗಳಾದ ಎಸ್.ಜೆ.ಸೋಮಶೇಖರ್ ಕೆ.ಸಿ.ಎಸ್(ಸಿ.ಸಿ.ಎ) ನಿಯಮಾವಳಿ-1957ರ ನಿಯಮ -10(1)ರ ಅನ್ವಯ ಇಲಾಖೆ ವಿಚಾರಣೆ ಕಾಯ್ದಿರಿಸಿ ಎಸ್.ಸಿದ್ದೇಶ್ವರ ಅವರನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






