ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ನವೆಂಬರ್. 14 : ನಗರದ ಎಪಿಎಂಸಿ ಆವರಣದಲ್ಲಿ ನವೆಂಬರ್ 16 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಕಂದಿಕೆರೆ ತಿಳಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ತಾಲ್ಲೂಕಿನಲ್ಲಿ 120 ಸಹಕಾರ ಸಂಘಗಳಿವೆ. ಇದರಲ್ಲಿ 64 ಹಾಲು ಉತ್ಪಾದಕರ ಸಹಕಾರ ಸಂಘಗಳು, 33 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, 1 ಪಿಎಲ್.ಡಿ ಬ್ಯಾಂಕ್, 1 ಟಿಎಪಿಸಿಎಂಎಸ್ ಬ್ಯಾಂಕ್ ಹಾಗೂ ಉಳಿದ 21 ಕ್ರೆಡಿಟ್ ಸೈಸೋಟಿಗಳು ಒಳಗೊಂಡಿವೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಕಂದಿಕೆರೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಅಧ್ಯಕ್ಷರಾದ ಹೆಚ್.ಎನ್ ತಿಪ್ಪೇಸ್ವಾಮಿ ಅವರು ಹಿರಿಯ ಸಹಕಾರಿಗಳಿಗೆ ಸನ್ಮಾನಿಸುವರು. ಯೂನಿಯನ್ ನಿಯಮಿತ ನಿರ್ದೇಶಕ ಈರಲೀಂಗೌಡ ಅವರು ಉತ್ತಮ ಸಹಕಾರ ಸಂಘಗಳಿಗೆ ಹಾಗೂ ನಿವೃತ್ತ ನೌಕರರು ಸಹಕಾರಿಗಳಿಗೆ ಮಂಜುನಾಥ್ ಮಾಳಿಗೆ ಸನ್ಮಾನಿಸಲಿದ್ದಾರೆ.
ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಜೆ. ಹನುಮಂತರಾಯ, ಶಿಮುಲ್ ಹಾಗೂ ಯೂನಿಯನ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಸೇರಿದಂತೆ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರು, ನೌಕರರು, ಹಿರಿಯ ಹಾಗೂ ನಿವೃತ್ತ ಸಹಕಾರಿಗಳು ಮತ್ತು ಸಹಕಾರ ಸಂಘಗಳ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ತಾಲೂಕು ಸಹಕಾರಿ ಸಂಘಗಳ ಯುನಿಯನ್ ರಚಿಸುವ ಮತ್ತು ಸಂಘಟಿಸುವ ಉದ್ದೇಶದಿಂದ ಸದರಿ ಕಾರ್ಯಕ್ರಮಕ್ಕೆ ತಪ್ಪದೇ ಭಾಗವಹಿಸಬೇಕು ಎಂದು ಜಗದೀಶ್ ಕಂದಿಕೆರೆ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್